106 views 0 secs 0 comments

ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಹೆಚ್ಚಳ!

In Uncategorized
March 01, 2024

ನವದೆಹಲಿ: 19 ಕೆಜಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆ ಇಂದಿನಿಂದ 25 ರೂ.ಗಳಷ್ಟು ಹೆಚ್ಚಳವಾಗಿದೆ.
ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ LPG ಗ್ಯಾಸ್ ಸಿಲಿಂಡರ್‌ ಗಳ ಬೆಲೆ ಪರಿಷ್ಕರಿಸಿದ್ದು, ಈ ಮೂಲಕ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು 25 ರೂ.ಗಳಷ್ಟು ಹೆಚ್ಚಿಸಲಾಗಿದೆ. ಈ ಹೊಸ ದರ ಇಂದಿನಿಂದಲೇ ಜಾರಿಯಾಗಲಿದೆ.
ಇದರ ಬೆಲೆ ಏರಿಕೆಯ ನಂತರ ದೆಹಲಿಯಲ್ಲಿ ವಾಣಿಜ್ಯ ಎಲ್‌ ಪಿಜಿ ಸಿಲಿಂಡರ್ 1,795 ರೂ.ಗೆ ಮಾರಾಟವಾಗುತ್ತಿದೆ. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಕೋಲ್ಕತ್ತಾದಲ್ಲಿ 1,911 ರೂ., ಮುಂಬಯಿನಲ್ಲಿ 1,749 ರೂ. ಮತ್ತು ಚೆನ್ನೈನಲ್ಲಿ 1,960.50 ರೂ.ಗೆ ಮಾರಾಟವಾಗುತ್ತಿವೆ.

ಈ ಸುದ್ದಿ ಹಂಚಿಕೊಳ್ಳಿ