ಕಾಂಗ್ರೆಸ್ ವಿರುದ್ಧ ಅವಹೇಳನಾಕಾರಿ ಜಾಹೀರಾತು; ನಡ್ಡಾ ವಿರುದ್ಧ ದೂರು ದಾಖಲು!

In ಅಪರಾಧ, ದೇಶ
May 05, 2024

ಬೆಂಗಳೂರು: ಕಾಂಗ್ರೆಸ್ ವಿರುದ್ಧ ಅವಹೇಳನಾಕಾರಿ ಜಾಹೀರಾತು ನೀಡಿರುವ ಹಿನ್ನೆಲೆಯಲ್ಲಿ ಬಿಜೆಪಿ (BJP) ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ (JP Nadda) ವಿರುದ್ಧ ಎಫ್‌ಐಆರ್‌ (FIR) ದಾಖಲಾಗಿದೆ.

ಜಾಹೀರಾತು ಖಂಡಿಸಿ ಕರ್ನಾಟಕ ಕಾಂಗ್ರೆಸ್‌ (Congress) ಸಿಲಿಕಾನ್ ಸಿಟಿಯ ಹೈಗ್ರೊಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿತ್ತು. ಕಾಂಗ್ರೆಸ್ ನೀಡಿದ ದೂರಿನ ಹಿನ್ನೆಲೆಯಲ್ಲಿ ಕಾಂಗ್ರೆಸ್ ದೂರಿನ ಮೇರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಕರ್ನಾಟಕ ಬಿಜೆಪಿ ಅಧ್ಯಕ್ಷ ವಿಜಯೇಂದ್ರ, ಬಿಜೆಪಿ ಐಟಿ ಸೆಲ್‌ ಮುಖ್ಯಸ್ಥ ಅಮಿತ್‌ ಮಾಳವೀಯ ವಿರುದ್ಧ ಪ್ರಕರಣ ದಾಖಲಾಗಿದೆ.

ಬಿಜೆಪಿಯು ಚುನಾವಣೆ ಹಿನ್ನೆಲೆಯಲ್ಲಿ ಜಾಹೀರಾತೊಂದನ್ನು ಬಿಡುಗಡೆ ಮಾಡಿತ್ತು. ಅದು ಎಸ್‌ಸಿ, ಎಸ್‌ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂಬುವುದಾಗಿತ್ತು. ಈ ಹಿನ್ನೆಲೆಯಲ್ಲಿ ಇದನ್ನು ಖಂಡಿಸಿ ಕಾಂಗ್ರೆಸ್ ಜಾಹೀರಾತು ನೀಡಿದೆ.

ಈ ಸುದ್ದಿ ಹಂಚಿಕೊಳ್ಳಿ