ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ ಹೇಳಿಕೆ; ಯತ್ನಾಳ್ ವಿರುದ್ಧ ದೂರು!

ಬೆಂಗಳೂರು: ಸಚಿವ ದಿನೇಶ್ ಗುಂಡೂರಾವ್ ಮನೆಯಲ್ಲಿ ಪಾಕಿಸ್ತಾನ ಇದೆ ಎಂದು ಹೇಳಿಕೆ ನೀಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದೂರು ದಾಖಲಾಗಿದೆ.

ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಗಾಂಧಿನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ದೂರು ದಾಖಲಿಸಲಾಗಿದೆ. ಯತ್ನಾಳ್ ಗುಂಡೂರಾವ್ ಕುಟುಂಬಸ್ಥರನ್ನು ಅವಮಾನಿಸಿದ್ದಾರೆ. ಕೋಮು ಸೌಹಾರ್ದತೆ ಹಾಳು ಮಾಡಲು ಈ ರೀತಿ ಮಾತಾಡುತ್ತಿದ್ದಾರೆ. ಇದು ದೇಶ ವಿರೋಧಿ ಹೇಳಇಕೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಯತ್ನಾಳ್ ಅವರು ‘ರಾಮೇಶ್ವರ ಕೆಫೆ ಬಾಂಬ್ ಬ್ಲಾಸ್ಟ್ ಕೇಸ್​ನಲ್ಲಿ ಬಿಜೆಪಿ ಕಾರ್ಯಕರ್ತ ವಿಚಾರಣೆ ನಡೆಸಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಕುರಿತು ಮಾತನಾಡುವ ಸಂದರ್ಭದಲ್ಲಿ ಸಚಿವರ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ ಎಂದಿದ್ದರು. ಇದೀಗ ಈ ಕುರಿತು ದೂರು ದಾಖಲಾಗಿದೆ.

ಈ ಸುದ್ದಿ ಹಂಚಿಕೊಳ್ಳಿ