75 views 0 secs 0 comments

ತಂಗಿಯ ಮಗನೊಂದಿಗೆ ನೀರು ತರಲು ಹೋಗಿ ಮಸಣ ಸೇರಿದ ಮಹಿಳೆ!

In ಗದಗ, ರಾಜ್ಯ
May 05, 2024

ಗದಗ: ಕೃಷಿ ಹೊಂಡದಲ್ಲಿ ಬಿದ್ದು ಮಹಿಳೆ ಹಾಗೂ ಮಗು ಸಾವನ್ನಪ್ಪಿರುವ ಘಟನೆ ನಡೆದಿದೆ.

ಈ ಘಟನೆ ಜಿಲ್ಲೆಯ ಮುಂಡರಗಿ (Mundaragi) ತಾಲೂಕಿನ ಹೈತಾಪುರ ಗ್ರಾಮದಲ್ಲಿ ನಡೆದಿದೆ. ಗೀತಾ ಹೆಸರೂರು(34) ಹಾಗೂ ಮನೋಜ್ ಕವಲೂರು(5) ಸಾವನ್ನಪ್ಪಿರುವ ದುರ್ದೈವಿಗಳು ಎಂದು ಗುರುತಿಸಲಾಗಿದೆ.

ಮಹಿಳೆಯು ತಂಗಿ ಮಗನ ಜೊತೆ ನೀರು ತರಲು ಹೋಗಿದ್ದ ಸಂದರ್ಭದಲ್ಲಿ ಕಾಲು ಜಾರಿ ಮಗು ಮನೋಜ್ ಕೃಷಿಹೊಂಡದಲ್ಲಿ ಬಿದ್ದಿದ್ದಾನೆ. ಈ ಸಂದರ್ಭದಲ್ಲಿ ಆತನ ರಕ್ಷಣೆಗೆ ತೆರಳಿದ್ದ ಗೀತಾ ಕೂಡ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಶಾಲೆಗೆ ರಜೆ ಇದ್ದ ಹಿನ್ನೆಲೆಯಲ್ಲಿ ಮನೋಜ್ ತನ್ನ ದೊಡ್ಡಮ್ಮನ ಮನೆಗೆ ಬಂದಿದ್ದ ಎನ್ನಲಾಗಿದೆ. ಸದ್ಯ ಇಬ್ಬರ ಶವವನ್ನು ಹೊರ ತೆಗೆಯಲಾಗಿದೆ. ಈ ಕುರಿತು ಮುಂಡರಗಿ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲು ಮಾಡಲಾಗಿದೆ.

ಈ ಸುದ್ದಿ ಹಂಚಿಕೊಳ್ಳಿ