ದ್ವೇಷದ ವಿರುದ್ಧ ಮತ ಹಾಕಿದ್ದೇನೆ ಎಂದು ನಟ ಪ್ರಕಾಶ್ ರಾಜ್!

In ರಾಜ್ಯ, ರಾಜಕೀಯ
April 26, 2024

ದ್ವೇಷದ ವಿರುದ್ಧ ಮತ ಹಾಕಿದ್ದೇನೆ ಎಂದು ಬಹುಭಾಷಾ ನಟ ಪ್ರಕಾಶ್ ರಾಜ್ ಹೇಳಿದ್ದಾರೆ.

ಇಂದು ಬೆಳಿಗ್ಗೆಯೇ ಮತದಾನ ಮಾಡಿದ್ದ ನಟ, ದೇಶದ ಬದಲಾವಣೆಗಾಗಿ ಮತದಾನ ಮಾಡಿದ್ದೇನೆ. ದ್ವೇಷದ ವಿರುದ್ಧ ಮತ ಹಾಕಿರುವೆ. ಸಂಸತ್ ನಲ್ಲಿ ನನ್ನ ಪರವಾಗಿ ಧ್ವನಿ ಕೇಳಲಿ ಎಂದು ಮತದಾನ ಮಾಡಿದ್ದೇನೆ. ಪ್ರತಿಯೊಬ್ಬರೂ ಮತ ಹಾಕಿ ಎಂದು ಹೇಳಿದ್ದಾರೆ.

ಈ ಕುರಿತು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದಾರೆ. ಇದಕ್ಕೆ ಹಲವರು ಕಮೆಂಟ್ ಮಾಡುತ್ತಿದ್ದಾರೆ. ಹಲವರು ಪ್ರಕಾಶ್ ರಾಜ್ ರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಸುದ್ದಿ ಹಂಚಿಕೊಳ್ಳಿ