ನಕಲಿ ಆದೇಶ; ಎರಡು ಪ್ರತ್ಯೇಕ ದೂರು!

ಬೆಂಗಳೂರು: ಸರ್ಕಾರದ ಹಿರಿಯ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಆದೇಶ ಪತ್ರಗಳು ಹರಿದಾಡುತ್ತಿದ್ದು, ಈ ಕುರಿತು ವಿಧಾನ ಸೌಧ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಒಂದೇ ವಾರದಲ್ಲಿ ವಿಧಾನಸೌಧ ಪೊಲೀಸ್ ಠಾಣೆಗೆ ಇಬ್ಬರು ಸರ್ಕಾರಿ ‌ಹಿರಿಯ‌ ಅಧಿಕಾರಿಗಳು ದೂರು ಸಲ್ಲಿಸಿದ್ದಾರೆ.

ಸಿಎಂ ಅಪರ ಮುಖ್ಯ ಕಾರ್ಯದರ್ಶಿಗಳ‌ ಹೆಸರಿನಲ್ಲಿ ನಕಲಿ ಆದೇಶ ಪತ್ರ ಹರಿದಾಡುತ್ತಿವೆ. ಆರೋಗ್ಯ ಮತ್ತು ಕುಟುಂಬ ಇಲಾಖೆಯಲ್ಲಿ ಎನ್ ​ಹೆಚ್ ​ಎಂಗಳನ್ನು ಒಳಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲಾಗಿದೆ. ಎನ್ ​ಹೆಚ್​ಎಂ ನೌಕರರನ್ನು ಖಾಯಂ ಗೊಳಿಸಲಾಗಿದೆ ಎಂಬ ನಕಲಿ ಆದೇಶ ಪ್ರತಿಗಳು ಹರಿದಾಡುತ್ತಿವೆ. ದೇಶದ ಪ್ರತಿಯನ್ನು ಆರ್ಥಿಕ ಇಲಾಖೆ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ರವಾನಿಸಿದ್ದು ಈ ಆದೇಶ ಕುರಿತು ನೈಜತೆ ಪರಿಶೀಲನೆ ಸಂದರ್ಭದಲ್ಲಿ ಇದು ಬೆಳಕಿಗೆ ಬಂದಿದೆ. ಮುಖ್ಯಮಂತ್ರಿ‌ ಮುಖ್ಯ ಕಾರ್ಯದರ್ಶಿ ಸಿದ್ದೇಶ ಪೊತಲಕಟ್ಟಿ ಈ ಕುರಿತು ಪ್ರಕರಣ ದಾಖಲಿಸಿದ್ದಾರೆ.

ಇನ್ನೊಂದೆಡೆ ವಕ್ಫ್ ಬೋರ್ಡ್ ಕಾರ್ಯದರ್ಶಿ ಹೆಸರಿನಲ್ಲಿ ಕಾಂಟ್ರಾಕ್ಟ್ ಪಡೆದ ಆದೇಶ ಪ್ರತಿ ಹೊರಡಿಸಿ ದುಡ್ಡು ಮಾಡಲು ಹೊರಟಿರುವುದು ಬೆಳಕಿಗೆ ಬಂದಿದೆ.

ಈ ಸುದ್ದಿ ಹಂಚಿಕೊಳ್ಳಿ