ನಾಯಕರ ಸಂಧಾನ ಯಶಸ್ವಿ; ಬಿಜೆಪಿ ಸೇರಲಿರುವ ಪುತ್ತಿಲ!

ಬೆಂಗಳೂರು: ಲೋಕಸಭಾ ಚುನಾವಣೆ ವೇಳೆ ಹಿಂದು ಮುಖಂಡ ಅರುಣ್ ಕುಮಾರ್ ಪುತ್ತಿಲ ಮತ್ತೆ ಬಿಜೆಪಿ ಸೇರುತ್ತಿದ್ದಾರೆ ಎನ್ನಲಾಗಿದೆ.

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಹಿರಿಯ ನಾಯಕರು ಸಂಧಾನ ನಡೆಸಿದ್ದು, ಅರುಣ್ ಪುತ್ತಿಲ ಅವರನ್ನು ಮನವೊಲಿಸುವಲ್ಲಿ ಬಿಜೆಪಿ ನಾಯಕರು ಯಶಸ್ವಿಯಾಗಿದ್ದಾರೆ. ಹೀಗಾಗಿ ಅವರು ನಾಳೆ ಮಂಗಳೂರಿನಲ್ಲಿ ಅಧಿಕೃತವಾಗಿ ಬಿಜೆಪಿ ಸೇರಲಿದ್ದಾರೆ. ಈ ಮೂಲಕ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಆನೆ ಬಲಬಂದಂತಾಗಿದೆ.

ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್ ಕುಮಾರ್ ನೇತೃತ್ವದಲ್ಲಿ ಸಂಧಾನ ಸಭೆ ನಡೆದಿತ್ತು. ಕಳೆದ ವಿಧಾನಸಭಾ ಚುನಾವಣೆಯಿಂದ ಆರಂಭಗೊಂಡಿದ್ದ ಬಿಜೆಪಿ-ಪುತ್ತಿಲರ ನಡುವಿನ ಸಂಘರ್ಷ ಈಗ ಅಂತ್ಯವಾಗಿದೆ. ಯಾವುದೇ ಷರತ್ತು ಇಲ್ಲದೆ ಬಿಜೆಪಿ ಸೇರ್ಪಡೆಯಾಗಲು ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಆದರೂ ಪುತ್ತಿಲಗೆ ಯಾವ ಹುದ್ದೆ ನೀಡುತ್ತದೆ ಎಂದು ತಿಳಿಯದಾಗಿದೆ.

ಈ ಸುದ್ದಿ ಹಂಚಿಕೊಳ್ಳಿ