ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು; ಐವರ ಸ್ಥಿತಿ ಗಂಭೀರ

In ಅಪರಾಧ, ಮಂಡ್ಯ
March 14, 2024

ಮಂಡ್ಯ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿ ಕಾರು ಹಳ್ಳಕ್ಕೆ ಬಿದ್ದ ಘಟನೆ ನಡೆದಿದೆ.

ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರು ಹತ್ತಿರ ಈ ಘಟನೆ ನಡೆದಿದ್ದು, ಕಾರಿನಲ್ಲಿದ್ದ ಐವರು ಗಾಯಗೊಂಡಿದ್ದಾರೆ. ಈ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ವೇಗ‌ವಾಗಿ ಬರುತ್ತಿದ್ದರಿಂದ ನಿಯಂತ್ರಣ ತಪ್ಪಿ ಈ ದುರ್ಘಟನೆ ನಡೆದಿದೆ. ಗಾಯಾಳುಗಳನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಶ್ರೀರಂಗಪಟ್ಟಣ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಹಂಚಿಕೊಳ್ಳಿ