ಪೆಟ್ರೋಲ್ ತುಂಬಿದ್ದ ಟ್ಯಾಂಕರ್ ಪಲ್ಟಿ; ತಪ್ಪಿದ ಭಾರೀ ಅನಾಹುತ!

ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಪೆಟ್ರೋಲ್ ತುಂಬಿದ್ದ ಟ್ಯಾಂಕರ್ ಪಲ್ಟಿಯಾಗಿರುವ ಘಟನೆ ನಡೆದಿದೆ.

ಈ ಘಟನೆ ಎಲೆಕ್ಟ್ರಾನಿಕ್‌ ಸಿಟಿಯಲ್ಲಿ (Electronic City) ಇಂದು ಬೆಳಗ್ಗೆ ನಡೆದಿದೆ. ಮಂಗಳೂರಿನಿಂದ (Mangaluru) ಅತ್ತಿಬೆಲೆಗೆ ತೆರಳುತ್ತಿದ್ದ ಟ್ಯಾಂಕರ್ ನಗರದ ಎಲೆಕ್ಟ್ರಾನಿಕ್ ಸಿಟಿ ಹತ್ತಿರದ ಟೋಲ್ ಬಳಿ ಹೆದ್ದಾರಿಯಲ್ಲಿದ್ದ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಅದು ಪಲ್ಟಿಯಾಗಿದೆ. ಅದು ಪಲ್ಟಿಯಾದ ಕಾರಣ ಭಾರೀ ಪ್ರಮಾಣದಲ್ಲಿ ಪೆಟ್ರೋಲ್ (Petrol) ಸೋರಿಕೆಯಾಗಿದೆ. ಆದರೆ, ಅದೃಷ್ಟವಶಾತ್ ದೊಡ್ಡ ಅನಾಹುತವೊಂದು ತಪ್ಪಿದೆ.

ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಕ್ರೇನ್‌ ಬಳಸಿ ಟ್ಯಾಂಕರ್‌ ನ್ನು ಮೇಲಕ್ಕೆ ಎತ್ತಿದೆ.

ಈ ಸುದ್ದಿ ಹಂಚಿಕೊಳ್ಳಿ