ಮದುವೆಗೆ ಹೋಗಿದ್ದವರು ಮನೆಗೆ ಬಾರದೆ, ಮಸಣ ಸೇರಿದರು!

In ಅಪರಾಧ, ದೇಶ
April 21, 2024

ಟ್ರಕ್ ಹಾಗೂ ಕಾರಿನ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 9 ಜನ ಸಾವನ್ನಪ್ಪಿರುವ ಘಟನೆ ನಡೆದಿದೆ.

ರಾಜಸ್ಥಾನದ ಜಲಾವರ್ ಜಿಲ್ಲೆಯಲ್ಲಿನ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಮತ್ತೋರ್ವ ವ್ಯಕ್ತಿ ಗಂಭೀರವಾಗಿದ್ದು, ಸಾವು- ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ಸಾವನ್ನಪ್ಪಿದವರೆಲ್ಲ ಮಧ್ಯಪ್ರದೇಶದಲ್ಲಿ ಮದುವೆ ಸಮಾರಂಭಕ್ಕೆ ತೆರಳಿ ಮರಳಿ ಬರುತ್ತಿದ್ದರು ಎನ್ನಲಾಗಿದೆ.

ಕಾರಿನಲ್ಲಿ ಹೊರಟವರೆಲ್ಲ ಸಾವನ್ನಪ್ಪಿದ್ದಾರೆ. ಮೂವರು ಯುವಕರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇನ್ನುಳಿದ 6 ಜನ ಆಸ್ಪತ್ರೆಗೆ ದಾಖಲಿಸಿದ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಅತಿವೇಗದ ಚಾಲನೆಯೇ ಈ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ. ಅತೀ ವೇಗದಿಂದಾಗಿ ಟ್ರಕ್ ನಿಯಂತ್ರಣ ತಪ್ಪಿ ಎದುರಿಗೆ ಬರುತ್ತಿದ್ದ ಕಾರಿಗೆ ಡಿಕ್ಕಿಯಾಗಿದೆ. ಘಟನೆ ನಂತರ ಟ್ರಕ್ ಚಾಲಕ ಪರಾರಿಯಾಗಿದ್ದಾನೆ. ಲಾರಿ ಹರಿಯಾಣ ಮೂಲದ್ದು ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಮದುವೆಗೆ ಬಂದವರೆಲ್ಲ ಸೂತಕದ ವಾತಾವರಣದ್ದ ಓಡಿ ಹೋಗಿದ್ದಾರೆ. ಈ ಅವಘಡದಿಂದ ಮದುವೆಯ ಎರಡೂ ಮನೆಗಳಲ್ಲಿ ಶೋಕ ಮಡುಗಟ್ಟಿದೆ.

ಈ ಸುದ್ದಿ ಹಂಚಿಕೊಳ್ಳಿ