ಮದುವೆ ಮನೆಗೆ ತೆರಳಿ ಬರುತ್ತಿದ್ದಾಗ ಅಪಘಾತ; 7 ಜನ ಸಾವು!

ಭೀಕರ ಅಪಘಾತ ಸಂಭವಿಸಿದ್ದು, 7 ಜನ ಸಾವನ್ನಪ್ಪಿರುವ ಘಟನೆ ನಡೆದಿದೆ.

ಬಿಹಾರದ ಖಗಾರಿಯಾದಲ್ಲಿ ಈ ಘಟನೆ ನಡೆದಿದೆ. ಮದುವೆ ಮನೆಯಿಂದ ಮರಳಿ ಹೋಗುತ್ತಿದ್ದ ಸಂದರ್ಭದಲ್ಲಿ ಕಾರು ಹಾಗೂ ಟ್ರ್ಯಾಕ್ಟರ್ ಮಧ್ಯೆ ಅಪಘಾತ ಸಂಭವಿಸಿದೆ. ಪರಿಣಾಮ 7 ಜನ ಸಾವನ್ನಪ್ಪಿದ್ದಾರೆ. ಅಲ್ಲದೇ, ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ.

ಅಪಘಾತದ ಕುರಿತು ಮಾಹಿತಿ ಪಡೆದು ಸ್ಥಳಕ್ಕಾಗಮಿಸಿದ ಪೊಲೀಸರು ಗಾಯಾಳುಗಳನ್ನು ಹೊರ ತೆಗೆದಿದ್ದಾರೆ. ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿ ಹಂಚಿಕೊಳ್ಳಿ