ಮನೆಯಲ್ಲಿ ಪತ್ನಿಯೊಂದಿಗೆ ಪರಪುರುಷ; ಪತಿಯಿಂದ ಹಲ್ಲೆ!

ಬೆಂಗಳೂರು: ಪತ್ನಿಯ ಶೀಲ ಶಂಕಿಸಿ ಪತಿಯೇ ಹಲ್ಲೆ ನಡೆಸಿರುವ ಘಟನೆಯೊಂದು ನಡೆದಿದೆ.

ಸಿಲಿಕಾನ್ ಸಿಟಿಯ ಜೆ.ಪಿ ನಗರದಲ್ಲಿ ಈ ಘಟನೆ ನಡೆದಿದೆ. ಹೆಚ್ ​​ಎಸ್ ​ಆರ್ ಲೇಔಟ್ ​ನ ಖಾಸಗಿ ಕಂಪನಿ ಉದ್ಯೋಗಿಯಾಗಿರುವ ಮಹಿಳೆ, ಕಚೇರಿ ಕೆಲಸದ ವಿಚಾರವಾಗಿ ತನ್ನ ಸಹೋದ್ಯೋಗಿಯನ್ನು ಮನೆಗೆ ಕರೆಸಿಕೊಂಡು ಮಾತನಾಡುತ್ತಿದ್ದರು. ಈ ಸಂದರ್ಭದಲ್ಲಿ ಮನೆಗೆ ಬಂದಿದ್ದ ಪತಿ, ಶಾಕ್ ಆಗಿ ಅಕ್ರಮ ಸಂಬಂಧದ ಶಂಕೆ ವ್ಯಕ್ತಪಡಿಸಿದ್ದಾರೆ. ಅನುಮಾನದ ಹಿನ್ನಲೆಯಲ್ಲಿ ಚಾಕುವಿನಿಂದ ಇರಿದು ಹಲ್ಲೆ ಮಾಡಿದ್ದಾರೆ.

ಈ ದಂಪತಿಗೆ ಇಬ್ಬರು ಮಕ್ಕಳು ಇದ್ದಾರೆ. ಇಬ್ಬರಿಗೂ ಅಕ್ರಮ ಸಂಬಂಧದ ಶಂಕೆ ವ್ಯಕ್ತವಾಗಿದೆ. ಕತ್ತರಿ ಮತ್ತು ಚಾಕುವಿನಿಂದ ಹಲ್ಲೆಗೊಳಿಸಿದ್ದಾನೆ. ಹಲ್ಲೆಗೊಳಗಾದ ಮಹಿಳೆಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಈ ಸುದ್ದಿ ಹಂಚಿಕೊಳ್ಳಿ