ಯಡಿಯೂರಪ್ಪ ಪೋಕ್ಸೋ ಕೇಸ್ ಸಿಐಡಿಗೆ ವರ್ಗಾವಣೆ!

ಬೆಂಗಳೂರು: ಅಪ್ರಾಪ್ತೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆಯನ್ನು ಡಿಜಿಪಿ, ಸಿಐಡಿಗೆ ವರ್ಗಾಯಿಸಿ ಆದೇಶ ಹೊರಡಿಸಿದೆ.

ಪೊಲೀಸ್ ಮಹಾನಿರ್ದೇಶಕರ ಚೇರಿಯು ಪ್ರಕರಣವನ್ನು ಅಪರಾಧ ತನಿಖಾ ಇಲಾಖೆಗೆ ವರ್ಗಾಯಿಸಲು ಆದೇಶಿಸಿದೆ. ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಲಾಗಿದೆ.

ಫೆಬ್ರವರಿಯಲ್ಲಿ ದೌರ್ಜನ್ಯ ಎಸಗಿದ ಆರೋಪ ಕೇಳಿ ಬಂದಿದೆ. ಹೀಗಾಗಿ ಬಾಲಕಿ ತಾಯಿ ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾಳೆ. ಹೀಗಾಗಿ ಮಾಜಿ ಸಿಎಂ ವಿರುದ್ಧ ಪೋಕ್ಸೋ ಹಾಗೂ 354 (ಎ) ಐಪಿಸಿ ಅಡಿ ಪ್ರಕರಣ ದಾಖಲಿಸಲಾಗಿದೆ.

ಈ ಸುದ್ದಿ ಹಂಚಿಕೊಳ್ಳಿ