ರಷ್ಯಾದಲ್ಲಿ ಉಗ್ರ ದಾಳಿ; ಗುಂಡು ಹಾರಿಸಿ ಕತ್ತು ಸೀಳಿದ ಪಾಪಿ!

In ವಿದೇಶ
March 24, 2024

ರಷ್ಯಾದ ಮಾಸ್ಕೋದಲ್ಲಿ ನಡೆದ ಉಗ್ರ ದಾಳಿ ಇಡೀ ಜಗತ್ತನ್ನೇ ತಲ್ಲಣಗೊಳಿಸಿದೆ. ಸದ್ಯ ಇಲ್ಲಿಯವರೆಗೂ 150ಕ್ಕೂ ಅಧಿಕ ಮೃತದೇಹಗಳು ಪತ್ತೆಯಾಗಿದ್ದು, 107 ಜನರ ಸ್ಥಿತಿ ಗಂಭೀರವಾಗಿದೆ. 28 ಜನರ ಶವ ಶೌಚಾಲಯದಲ್ಲಿಯೇ ಪತ್ತೆಯಾಗಿವೆ ಎನ್ನಲಾಗಿದೆ.

ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 4 ಬಂದೂಕುಧಾರಿಗಳು ಸೇರಿದಂತೆ 11 ಜನರನ್ನು ಮಾಸ್ಕೋ ಪೊಲೀಸರು ಬಂಧಿಸಿದ್ದಾರೆ. 14 ಮೃತ ದೇಹಗಳು ಮೆಟ್ಟಿಲುಗಳ ಮೇಲೆ ಬಿದ್ದಿವೆ ಎನ್ನಲಾಗಿದೆ. ಈ ಘಟನೆಯನ್ನು ತೀವ್ರವಾಗಿ ಖಂಡಿಸಿರುವ ರಷ್ಯಾ ಅಧ್ಯಕ್ಷ
ಪುಟಿನ್, ತಮ್ಮ ಶತೃಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ರಷ್ಯಾ ವಿಭಜಿಸಲು ಯಾರಿಂದಲೂ ಸಾಧ್ಯವಾಗುವುದಿಲ್ಲ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ಹೇಳಿದ್ದಾರೆ.
ಭಯೋತ್ಪಾದಕನೊಬ್ಬ ಗಾಯಗೊಂಡ ವ್ಯಕ್ತಿಯ ಕತ್ತು ಸೀಳುತ್ತಿರುವುದು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಭಯೋತ್ಪಾದಕರು ಕನ್ಸರ್ಟ್ ಹಾಲ್‌ ಪೆಟ್ರೋಲ್ ಬಳಸಿ ಬೆಂಕಿ ಹಚ್ಚಿದ್ದಾರೆ. ಪೆಟ್ರೋಲ್ ಬಾಂಬ್ ಎಸೆದು ಮನಬಂದಂತೆ ಗುಂಡು ಹಾರಿಸಿದ್ದಾರೆ ಎಂದು ತಿಳಿದು ಬಂದಿದೆ.

ಈ ಸುದ್ದಿ ಹಂಚಿಕೊಳ್ಳಿ