114 views 0 secs 0 comments

ರಾಜ್ಯದಲ್ಲಿ 5 ದಿನ ಭಾರೀ ಮಳೆಯ ಮುನ್ಸೂಚನೆ; ಯೆಲ್ಲೋ ಅಲರ್ಟ್

In ರಾಜ್ಯ
April 03, 2024

ಬಿಸಿಲಿನಿಂದ ಕಂಗೆಟ್ಟಿರುವ ರಾಜ್ಯದ ಜನರಿಗೆ ಮಳೆರಾಯ ತಂಪೆರೆಯಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ 5 ದಿನಗಳ ಕಾಲ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇಂದಿನಿಂದ ಉತ್ತರ ಒಳನಾಡಿನ ಬಾಗಲಕೋಟೆ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರದಲ್ಲಿ ಅಧಿಕ ಮಳೆ ಸುರಿಯುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು,ಮಂಡ್ಯ, ಮೈಸೂರು, ರಾಮನಗರದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ರಾಮನಗರ, ತುಮಕೂರು, ವಿಜಯನಗರದಲ್ಲಿ ಒಣಹವೆ ಮುಂದುವರೆಯಲಿದೆ. ಮುಂದಿನ ಮೂರು ದಿನಗಳಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸೆಕೆ ಹಾಗೂ ಆರ್ದ್ರತೆ ಹೆಚ್ಚಾಗಲಿದೆ.

ಅಲ್ಲದೇ, ಮುಂದಿನ 5 ದಿನಗಳ ಕಾಲ ಬಾಗಲಕೋಟೆ, ಬೆಳಗಾವಿ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 2-4 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಳವಾಗಲಿದ್ದು, ಬೆಂಗಳೂರಿನಲ್ಲಿ ಇಂದು ಮೋಡಕವಿದ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಲಬುರಗಿಯಲ್ಲಿ 41.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಈ ಸುದ್ದಿ ಹಂಚಿಕೊಳ್ಳಿ