ರಾಜ್ಯದ ಈ ಜಿಲ್ಲೆಗಳಲ್ಲಿ ಮಾರ್ಚ್ 31ರಿಂದ ಮಳೆಯ ದರ್ಶನ

In ರಾಜ್ಯ
March 27, 2024

ರಾಜ್ಯದ ಜಿಲ್ಲೆಗಳಲ್ಲಿ ಮಾರ್ಚ್ 31ರಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕಳೆದ 24 ಗಂಟೆಗಳಲ್ಲಿ ಬಾಗಲಕೋಟೆಯಲ್ಲಿ 39.9 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದ್ದರೆ, ಚಾಮರಾಜನಗರದಲ್ಲಿ ಕನಿಷ್ಠ 18.0 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ.

ಈ ಸುದ್ದಿ ಹಂಚಿಕೊಳ್ಳಿ