125 views 0 secs 0 comments

ವಿದ್ಯಾರ್ಥಿಗಳಿದ್ದ ದೋಣಿ ಮುಳುಗಡೆ; ನಾಪತ್ತೆ!

In ಅಪರಾಧ, ದೇಶ
April 16, 2024

ಶ್ರೀನಗರ: ಶಾಲಾ ವಿದ್ಯಾರ್ಥಿಗಳಿದ್ದ ದೋಣಿ ಮುಳುಗಡೆಯಾಗಿರುವ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ.

ಗಂಡಾಬಾಲ್‌ ನಿಂದ ಶ್ರೀನಗರದ ಬಟ್ವಾರಕ್ಕೆ ಶಾಲಾ ವಿದ್ಯಾರ್ಥಿಗಳು ಹಾಗೂ ಸ್ಥಳೀಯರನ್ನು ಹೊತ್ಯೊಯ್ಯುತ್ತಿದ್ದ ದೋಣಿ ಮುಳುಗಡೆಯಾಗಿದೆ. ಈ ದೋಣಿ ಝೇಲಂ ನದಿಯಲ್ಲಿ ಮುಳುಗಿದೆ. ಪರಿಣಾಮವಾಗಿ ವಿದ್ಯಾರ್ಥಿಗಳು ಹಾಗೂ ಸ್ಥಳೀಯರು ನಾಪತ್ತೆಯಾಗಿದ್ದಾರೆ.

ಘಟನಾ ಸ್ಥಳಕ್ಕೆ ಆಗಮಿಸಿದ ರಾಜ್ಯ ವಿಪತ್ತು ಪರಿಹಾರ ಪಡೆ ನಾಪತ್ತೆಯಾದ ಪ್ರಯಾಣಿಕರಿಗಾಗಿ ರಕ್ಷಣಾ ಕಾರ್ಯ ಆರಂಭಿಸಿದೆ. ಈ ಭಾಗದಲ್ಲಿ ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ಈ ಅನಾಹುತ ಸಂಭವಿಸಿದೆ ಎನ್ನಲಾಗುತ್ತಿದೆ.

ಈ ಸುದ್ದಿ ಹಂಚಿಕೊಳ್ಳಿ