ಶಿವಮೊಗ್ಗದಲ್ಲಿ ಮನೆ ಮಾಡಿದ ದೊಡ್ಮನೆ ಸೊಸೆ

ಶಿವಮೊಗ್ಗ: ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯಾಗುತ್ತಿದ್ದಂತೆ ದೊಡ್ಮನೆ ಸೊಸೆ ಗೀತಾ ಶಿವರಾಜ್ ಕುಮಾರ್ ನಗರದಲ್ಲಿ ಮನೆ ಮಾಡಿದ್ದಾರೆ.
ಅಲ್ಲದೇ, ಚುನಾವಣೆಗೆ ಈಗಿನಿಂದಲೇ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್‌ ಪಕ್ಷ ಶುಕ್ರವಾರ ಮೊದಲ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. 9 ರಾಜ್ಯಗಳ 39 ಕ್ಷೇತ್ರಗಳಿಗೆ ಮೊದಲ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದೆ. ಮೊದಲ ಪಟ್ಟಿಯಲ್ಲೇ ಗೀತಾ ಶಿವರಾಜ್‌ಕುಮಾರ್‌ ಹೆಸರು ಘೋಷಣೆಯಾಗಿದೆ. ಹೀಗಾಗಿ ಅವರು ಚುನಾವಣೆ ಸಿದ್ಧತೆಯಲ್ಲಿ ಕಾರ್ಯ ನಿರತರಾಗಿದ್ದಾರೆ.
ಚುನಾವಣಾ ಕಾರ್ಯಗಳಿಗಾಗಿ ಬಾಡಿಗೆಮನೆ ಮಾಡಿದ್ದಾರೆ. ಚುನಾವಣಾ ಪ್ರಚಾರ ಕಾರ್ಯಗಳಿಗೆ ಸಚಿವ ಮಧು ಬಂಗಾರಪ್ಪ ಮತ್ತು ಗೀತಾ ಶಿವರಾಜ್‌ಕುಮಾರ್‌ ಪೂರ್ವ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಶಿವಮೊಗ್ಗದ ಕಲ್ಲಹಳ್ಳಿ ಬಡಾವಣೆಯಲ್ಲಿ ಮಧು ಬಂಗಾರಪ್ಪ ನಿವಾಸದ ಪಕ್ಕದಲ್ಲೇ ಮನೆಯೊಂದನ್ನ ಬಾಡಿಗೆ ಮನೆ ಮಾಡಿದ್ದಾರೆ.

ಈ ಸುದ್ದಿ ಹಂಚಿಕೊಳ್ಳಿ