77 views 0 secs 0 comments

ಹುಚ್ಚ ಎಂದು ಗೇಲಿ; ಯುವತಿ ಮೇಲೆ ಚಾಕುವಿನಿಂದ ಹಲ್ಲೆ!

In ದೇಶ
March 24, 2024

ನಿಂದಿಸಿದ್ದಕ್ಕೆ ಯುವತಿಗೆ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಡೆದಿದೆ.

ಈ ಘಟನೆ ದೆಹಲಿಯ ಮುಖರ್ಜಿ ನಗರದಲ್ಲಿ ನಡೆದಿದೆ. ಅಮಾನ್ ಎಂಬ ವ್ಯಕ್ತಿ ಚಾಕುವಿನಿಂದ ಇರಿದಿದ್ದಾನೆ ಎನ್ನಲಾಗಿದೆ. ಆ ಪ್ರದೇಶದಲ್ಲಿನ ವಿದ್ಯಾರ್ಥಿಗಳು ಅಮಾನ್ ನನ್ನು ಹುಚ್ಚ ಎಂದು ಗೇಲಿ ಮಾಡುತ್ತಿದ್ದರು.

ಈ ಪ್ರದೇಶದ ಲೈಬ್ರರಿಗೆ ಓದಲು ಬರುತ್ತಿದ್ದ ಮಹಿಳೆ ಕೂಡ ಆತನನ್ನು ಗೇಲಿ ಮಾಡಿದ್ದಳು. ಇದರಿಂದ ಕೋಪಗೊಂಡ ಆತ ಚಾಕುವಿನಿಂದ ಇರಿದು ಗೇಲಿ ಮಾಡಿದ್ದಾನೆ ಎನ್ನಲಾಗಿದೆ. ಅಲ್ಲಿದ್ದ ಸ್ಥಳೀಯರು ಯುವತಿಯನ್ನು ಕಾಪಾಡಿದ್ದಾರೆ. ಹೀಗಾಗಿ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆ ವ್ಯಕ್ತಿಯನ್ನು ಸ್ಥಳೀಯರು ಹಿಡಿಯಲು ಯತ್ನಿಸಿದಾಗ ಆತ ಮತ್ತೆ ಓಡಿ ಬಂದು ಯುವತಿ ಮೇಲೆ ದಾಳಿ ಮಾಡಿದ್ದಾನೆ. ಆನಂತರ ಆತ ಪರಾರಿಯಾಗಿದ್ದಾನೆ. ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಈ ಸುದ್ದಿ ಹಂಚಿಕೊಳ್ಳಿ