ಸಚಿವರ ಮನೆಯ ಮುಂದೆ ಹೊತ್ತಿ ಉರಿದ ಕಾರು

ಚಿಕ್ಕಬಳ್ಳಾಪುರ: ಸಚಿವರ ಮನೆಯ ಮುಂದೆ ಕಾರೊಂದು ಹೊತ್ತಿ ಉರಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಉನ್ನತ ಶಿಕ್ಷಣ ಸಚಿವ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ ಸುಧಾಕರ್ (M. C. Sudhakar) ಮನೆಯ ಮುಂದೆ ಸ್ಕಾರ್ಪಿಯೋ (Scorpio) ಕಾರು ಹೊತ್ತಿ ಉರಿದೆ. ಶನಿವಾರ ಸಂಜೆ ಏಕಾಏಕಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಹೊತ್ತಿ ಉರಿದಿದೆ. ಕೂಡಲೇ ಸ್ಥಳೀಯರು ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದು, ಬೆಂಕಿ ನಂದಿಸಲಾಗಿದೆ.

ಚಿಂತಾಮಣಿ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿ ಹಂಚಿಕೊಳ್ಳಿ