ಬಸ್ ಟಿಕೆಟ್ ದರ ಏರಿಕೆ: ಬಿಜೆಪಿಯಿಂದ ಪ್ರತಿಭಟನೆ

In ರಾಜಕೀಯ, ರಾಜ್ಯ
January 03, 2025

ಬೆಂಗಳೂರು: ಕೆಎಸ್ ಆರ್ ಟಿಸಿ ಟಿಕೆಟ್ ದರ ಏರಿಕೆ ಮಾಡಿದ್ದಕ್ಕೆ ಬಿಜೆಪಿಯಿಂದ ವಿನೂತನ ಪ್ರತಿಭಟನೆ ನಡೆಯಿತು.
ನಗರದ ಮೆಜೆಸ್ಟಿಕ್ ನ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಯಿತು. ಪ್ರತಿಪಕ್ಷ ನಾಯಕ ಆರ್. ಅಶೋಕ್, ವಿಧಾನಪ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಪ್ರತಿಭಟನೆ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಮುಖವಾಡ ಧರಿಸಿದ್ದರು. ಪುರುಷ ಪ್ರಯಾಣಿಕರಿಗೆ ಗುಲಾಬಿ ಹೂ ನೀಡಿ ನೀಡಿ ವಿನೂತನವಾಗಿ ಪ್ರತಿಭಟಿಸಲಾಯಿತು.

ಈ ವೇಳೆ ಮಾತನಾಡಿರುವ ಆರ್. ಅಶೋಕ್, ಕರ್ನಾಟಕದ 7 ಕೋಟಿ ಜನರು ಹೊಸ ವರ್ಷಕ್ಕೆ ಉಡುಗೊರೆಗೆ ಕಾಯುತ್ತಿದ್ದೆವು. ಈಗಾಗಲೇ ಪ್ರಧಾನಿ ಮೋದಿ ಅವರು ಹೊಸ ವರ್ಷಕ್ಕೆ ರೈತರಿಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ. ಆದರೆ, ದಿ ಗ್ರೇಟ್ 14 ಬಜೆಟ್ ಚಾಂಪಿಯನ್ ಸಿದ್ದರಾಮಯ್ಯನವರು ಬಸ್ ದರ ಏರಿಕೆಯ ಉಡುಗೊರೆ ನೀಡಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ರಾಜ್ಯ ಸರಕಾರವು ಅಭಿವೃದ್ಧಿ ವಿಚಾರದಲ್ಲಿ ಶೂನ್ಯ ಸಾಧನೆ ಮಾಡಿದೆ. ಆದರೆ, ಬೆಲೆ ಏರಿಕೆ ನಿರಂತರವಾಗಿ ಸಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಈ ಸುದ್ದಿ ಹಂಚಿಕೊಳ್ಳಿ