ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು!

ಕೊಡಗು: ನಿರ್ಮಾಣ ಹಂತದ ಕಟ್ಟಡದ ಮೇಲಿಂದ ಆಯ ತಪ್ಪಿ ಬಿದ್ದು ಕಾರ್ಮಿಕ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಮಡಿಕೇರಿಯಲ್ಲಿ ನಡೆದಿದ್ದು, ಕೋಲ್ಕತ್ತಾ ಮೂಲದ ರಾಕಿಬ್ (22) ಸಾವನ್ನಪ್ಪಿದ ಕಾರ್ಮಿಕ ಎನ್ನಲಾಗಿದೆ.
ರಾಕಿಬ್‌ ಇಂದು ಬೆಳಿಗ್ಗೆ ಕಟ್ಟಡದ ಕಿಟಕಿ ಕೆಲ ಮಾಡುತ್ತಿದ್ದ. ಈ ವೇಳೆ ಆಯ ತಪ್ಪಿ 30 ಅಡಿ ಎತ್ತರದಿಂದ ಸಿಮೆಂಟ್ ನೆಲಕ್ಕೆ ಬಿದ್ದ ಗಂಭೀರವಾಗಿ ಗಾಯಗೊಂಡಿದ್ದಾರೆ. ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
ಸ್ಥಳಕ್ಕೆ ಮಡಿಕೇರಿ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಈ ಸುದ್ದಿ ಹಂಚಿಕೊಳ್ಳಿ