ಸಂಕಲ್ಪ ಪತ್ರ ಹೆಸರಿನಲ್ಲಿ ಬಿಜೆಪಿ ಚುನಾವಣಾ ಪ್ರಣಾಳಿಕೆ!

ನವದೆಹಲಿ: ಲೋಕಸಭಾ ಚುನಾವಣೆಗೆ ಭರ್ಜರಿಯಾಗಿ ಸಿದ್ಧವಾಗಿರುವ ಹಾಗೂ ಈ ಬಾರಿಯೂ ಅಧಿಕಾರದ ಗದ್ದುಗೆ ಪಕ್ಕಾ ಎನ್ನುತ್ತಿರುವ ಬಿಜೆಪಿ ‘ಸಂಕಲ್ಪ ಪತ್ರ’ ಹೆಸರಿನಲ್ಲಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದೆ.

ದೆಹಲಿಯ ಬಿಜೆಪಿ ಕಚೇರಿಯಲ್ಲಿ ಕಾರ್ಯಕ್ರಮ ನಡೆಯಿತು. ಪ್ರಣಾಳಿಕೆ ಕಾರ್ಯಕ್ರಮದಲ್ಲಿ ಪ್ರದಾನಿ ನರೇಂದ್ರ ಮೋದಿ ಸೇರಿದಂತೆ ಪಕ್ಷದ ಹಿರಿಯ ನಾಯಕರು ಭಾಗಿಯಾಗಿದ್ದಾರೆ. ಸಂವಿಧಾನ ಶಿಲ್ಪಿ ಡಾ. ಬಿ.ಆರ್‌.ಅಂಬೇಡ್ಕರ್‌ ಜಯಂತಿ ದಿನದಂದೇ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿತು.
ಕಾರ್ಯಕ್ರಮಕ್ಕೂ ಮುನ್ನ ಪ್ರಧಾನಿ ಮೋದಿ ಅವರು ಅಂಬೇಡ್ಕರ್‌ ಅವರ ಪುತ್ಥಳಿಗೆ ಪ್ರಧಾನಿ ಮೋದಿ ಸೇರಿದಂತೆ ಹಿರಿಯ ನಾಯಕರು ಪುಷ್ಪ ನಮನ ಸಲ್ಲಿಸಿದರು.

ಪ್ರತಿ ಕ್ಷಣವೂ ದೇಶಕ್ಕಾಗಿ.. 24*7 For 2047 ಚುನಾವಣಾ ಘೋಷವಾಕ್ಯದೊಂದಿಗೆ ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿತು. ಇದೇ ವೇಳೆ ಮೋದಿ ಅವರ 10 ವರ್ಷಗಳ ಸಾಧನೆ ಸಾಕ್ಷ್ಯಚಿತ್ರ ಪ್ರದರ್ಶನ ಮಾಡಲಾಯಿತು.

ಈ ಸುದ್ದಿ ಹಂಚಿಕೊಳ್ಳಿ