ನೂತನ ಸಂಸದ ಕೋಟ ಶ್ರೀನಿವಾಸ ಪೂಜಾರಿಗೆ ಮಾತೃ ವಿಯೋಗ

In ಉಡುಪಿ
June 30, 2024

ಉಡುಪಿ: ಮಾಜಿ ಸಚಿವ ಹಾಗೂ ನೂತನ ಸಂಸದ ಕೋಟ ಶ್ರೀನಿವಾಸ ಪೂಜಾರಿ (Kota Srinivas Poojary) ಅವರಿಗೆ ಮಾತೃ ವಿಯೋಗವಾಗಿದೆ.

ಕೋಟದ ಕೋಟತಟ್ಟು ನಿವಾಸಿ ಲಚ್ಚಿ ಪೂಜಾರ್ತಿ (97) ಇಹಲೋಕ ತ್ಯಜಿಸಿದ ತಾಯಿ. ಲಚ್ಚಿ ಪೂಜಾರ್ತಿ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಆದರೆ, ಇಂದು ಇಹಲೋಕ ತ್ಯಜಿಸಿದ್ದಾರೆ.

ಮೃತರು ಪುತ್ರ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಲಚ್ಚಿ ಪೂಜಾರ್ತಿ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ಗ್ರಾಮದಲ್ಲಿಯೇ ಅಂತ್ಯ ಸಂಸ್ಕಾರ ನಡೆಸಲು ಕುಟುಂಬಸ್ಥರು ಸಿದ್ಧತೆ ನಡೆಸಿಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಈ ಸುದ್ದಿ ಹಂಚಿಕೊಳ್ಳಿ