53 views 1 sec 0 comments

ಭಾರೀ ಮಳೆಗೆ ಕಟ್ಟಡ ಕುಸಿತ; 7 ಜನ ಸಾವು

In ದೇಶ
July 07, 2024

ಗಾಂಧಿನಗರ: ಸೂರತ್‍ನಲ್ಲಿ (Surat) ಭಾರೀ ಮಳೆಯಿಂದಾಗಿ ಕಟ್ಟಡ ಕುಸಿದು ಬಿದ್ದು (Building Collapse) 7 ಜನ ಸಾವನ್ನಪ್ಪಿರುವ ಘಟನೆ ನಡೆದಿದೆ.

ಕಟ್ಟಡದ ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣೆಗೆ ಎನ್‍ಡಿಆರ್‌ಎಫ್‌ ಸಿಬ್ಬಂದಿ ಶೋಧಕಾರ್ಯ ನಡೆಸುತ್ತಿದ್ದಾರೆ. ಶನಿವಾರ ರಾತ್ರಿ ಮಹಿಳೆಯೊಬ್ಬರನ್ನು ಅವಶೇಷಗಳ ಅಡಿಯಿಂದ ರಕ್ಷಿಸಲಾಗಿತ್ತು. ಈ ದುರ್ಘಟನೆಯಲ್ಲಿ ಸುಮಾರು 15 ಜನ ಗಾಯಗೊಂಡಿದ್ದಾರೆ. ಜನರ ರಕ್ಷಣೆಗಾಗಿ ಎನ್‍ಡಿಆರ್‍ಎಫ್ ಸಿಬ್ಬಂದಿ ರಾತ್ರಿಯಿಡೀ ಕಾರ್ಯ ನಿರ್ವಹಿಸಿದ್ದಾರೆ.

ಕುಸಿದು ಬಿದ್ದ ಕಟ್ಟಡದಲ್ಲಿ ಐದು ಕುಟುಂಬಗಳು ವಾಸವಾಗಿದ್ದವು ಎಂದು ತಿಳಿದು ಬಂದಿದೆ. ಈ ಕಟ್ಟಡವನ್ನು 2017 ರಲ್ಲಿ ನಿರ್ಮಿಸಲಾಗಿತ್ತು. ಈ ದುರ್ಘಟನೆ ವೇಳೆ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದ ಅನೇಕರು ಕಟ್ಟಡದ ಒಳಗೆ ಮಲಗಿದ್ದರು ಎನ್ನಲಾಗಿದೆ. 8 ವರ್ಷಗಳ ಹಿಂದಷ್ಟೇ ನಿರ್ಮಾಣವಾಗಿದ್ದ ಈ ಕಟ್ಟಡ ಬಹುತೇಕ ಶಿಥಿಲಾವಸ್ಥೆಯಲ್ಲಿತ್ತು. ಕಳೆದ ಕೆಲವು ದಿನಗಳಿಂದ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಕುಸಿದು ಈ ದುರಂತಕ್ಕೆ ಕಾರಣವಾಗಿದೆ ಎಂದು ತಿಳಿದು ಬಂದಿದೆ.

ಈ ಸುದ್ದಿ ಹಂಚಿಕೊಳ್ಳಿ