ರಸ್ತೆ ಮಧ್ಯೆಯೇ ಹೊತ್ತಿ ಉರಿದ ಬಸ್!

ಸಿಲಿಕಾನ್ ಸಿಟಿಯಲ್ಲಿ ನಡು ರಸ್ತೆಯಲ್ಲಿಯೇ ಬಿಎಂಟಿಸಿ ಬಸ್ ಹೊತ್ತಿ ಉರಿದ ಘಟನೆ ನಡೆದಿದೆ.

ರಸ್ತೆ ಮಧ್ಯೆಯೇ ಬಿಎಂಟಿಸಿ ಬಸ್ ಹೊತ್ತಿ ಉರಿದ ಘಟನೆ ಎಂಜಿ ರಸ್ತೆಯ ಅನಿಲ್ ಕುಂಬ್ಳೆ ಸರ್ಕಲ್ ಹತ್ತಿರ ನಡೆದಿದೆ. ಬಸ್ ರೋಸ್ ಗಾರ್ಡನ್ ನಿಂದ ಶಿವಾಜಿನಗರದ ಕಡೆಗೆ ತೆರಳುತ್ತಿದ್ದಾಗ ಬಸ್‍ ಇಂಜಿನ್‍ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಚಾಲಕ ಪ್ರಯಾಣಿಕರನ್ನು ಕೆಳಗೆ ಇಳಿಸಿದ್ದರಿಂದ ಭಾರೀ ಅನಾಹುತ ತಪ್ಪಿದೆ. ಈ ಬಸ್ ನಲ್ಲಿ ಸುಮಾರು 30 ಜನ ಪ್ರಯಾಣಿಕರಿದ್ದರು ಎಂದು ಬಸ್‍ನ ನಿರ್ವಾಹಕ ತಿಳಿಸಿದ್ದಾರೆ.

ಸ್ಥಳ್ಕಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ನಂತರ ಪೊಲೀಸರು ಉಂಟಾಗಿದ್ದ ಟ್ರಾಫಿಕ್ ಜಾಮ್ ಕ್ಲಿಯರ್ ಮಾಡಿ ವಾಹನ ಸಂಚಾರಕ್ಕೆ ಅವಕಾಶ ಮಾಡಿದ್ದಾರೆ. ಸ್ಥಳಕ್ಕೆ ಆಗಮಿಸಿರುವ ಬಿಎಂಟಿಸಿ ಸಿಬ್ಬಂದಿ ಹಾಗೂ ಮೆಕ್ಯಾನಿಕ್‍ಗಳು ಬೆಂಕಿಗಾಹುತಿಯಾದ ಬಸ್‍ನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಈ ಸುದ್ದಿ ಹಂಚಿಕೊಳ್ಳಿ