ಚಿತ್ರೀಕರಣದ ವೇಳೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲಾದ ನಟಿ

ಕನ್ನಡದ ‘ಐರಾವತ’ ನಟಿ ಊರ್ವಶಿ ರೌಟೇಲಾ (Urvashi Rautela) ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇದರಿಂದ ಅವರ ಅಭಿಮಾನಿಗಳಿಗೆ ಆತಂಕವಾಗಿದೆ. ಊರ್ವಶಿ ಇತ್ತೀಚೆಗೆ ಒಂದಿಲ್ಲೊಂದು ಕಾರಣದಿಂದ ಸುದ್ದಿಯಾಗುತ್ತಲೇ ಇದ್ದಾರೆ. ಬಾಲಯ್ಯ ನಟನೆಯ 109ನೇ ಸಿನಿಮಾದ ಶೂಟಿಂಗ್‌ನಲ್ಲಿ ನಟಿ ಕಾಲಿಗೆ ಏಟಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಾಲಯ್ಯ (Balayya) ಹೊಸ ಸಿನಿಮಾದಲ್ಲಿ ಊರ್ವಶಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಸದ್ಯ ಈ ಸಿನಿಮಾದ ಆ್ಯಕ್ಷನ್ ದೃಶ್ಯ ಚಿತ್ರೀಕರಣದ ಸಂದರ್ಭದಲ್ಲಿ ಊವರ್ಶಿ ಕಾಲಿಗೆ ಪೆಟ್ಟಾಗಿದೆ. ಕೂಡಲೇ ಅವರನ್ನು ಹೈದರಾಬಾದ್‌ ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಆದರೆ, ಗಾಯದ ತೀವ್ರತೆ ಬಗ್ಗೆ ಸ್ಪಷ್ಟ ಮಾಹಿತಿ ಸಿಕ್ಕಿಲ್ಲ. ಬಾಲಿವುಡ್ ಬೆಡಗಿಗೆ ಪೆಟ್ಟಾಗಿರುವ ವಿಷಯ ತಿಳಿದು ಅಭಿಮಾನಿಗಳು ಬೇಗ ಚೇತರಿಸಿಕೊಳ್ಳುವಂತೆ ಪ್ರಾರ್ಥಿಸುತ್ತಿದ್ದಾರೆ. ಈ ಚಿತ್ರವನ್ನು ಅನಿಲ್ ರವಿಪುಡಿ ನಿರ್ದೇಶನ ಮಾಡುತ್ತಿದ್ದು, ಬಾಬಿ ಡಿಯೋಲ್ ವಿಲನ್ ಆಗಿ ಅಬ್ಬರಿಸುತ್ತಿದ್ದಾರೆ. ನಟಿ ಚಾಂದಿನಿ ಕೂಡ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ಈ ಸುದ್ದಿ ಹಂಚಿಕೊಳ್ಳಿ