110 views 0 secs 0 comments

ಇಂದಿನಿಂದ ಮತ್ತೆ ಶುರುವಾಗಲಿದೆ ಮಳೆರಾಯನ ಆರ್ಭಟ!

In ರಾಜ್ಯ
July 31, 2024

ಇಂದಿನಿಂದ ರಾಜ್ಯದಲ್ಲಿ ಮತ್ತೆ ಮಳೆರಾಯನ ಆರ್ಭಟ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ.

ಹೀಗಾಗಿ ಇಂದಿನ ಕರಾವಳಿ ಹಾಗೂ ಮಲೆನಾಡು ಪ್ರದೇಶ ಸೇರಿದಂತೆ ಕೆಲವು ಜಿಲ್ಲೆಗಳ ಜನರು ಎಚ್ಚರಿಕೆಯಿಂದ ಇರಬೇಕಾದ ಅನಿವಾರ್ಯತೆ ಇದೆ. ಹೆಚ್ಚು ಮಳೆಯಾಗಲಿರುವ 5 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಹಾಸನ, ಉತ್ತರ ಕನ್ನಡಕ್ಕೆ ಆರೆಂಜ್ ಅಲರ್ಟ್, ಬೆಳಗಾವಿ, ಮೈಸೂರಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಹೀಗಾಗಿ ಈ ಪ್ರದೇಶದ ಜನರು ಹೆಚ್ಚು ಎಚ್ಚರಿಕೆಯಿಂದ ಇರಬೇಕು. ಗುಡ್ಡ ಪ್ರದೇಶದ ಹತ್ತಿರ ಇರುವ ಜನರಂತೂ ಇನ್ನೂ ಹೆಚ್ಚು ಎಚ್ಚರಿಕೆ ವಹಿಸಬೇಕೆಂದು ಸೂಚಿಸಲಾಗಿದೆ.

ಇನ್ನುಳಿದಂತೆ ವಿಜಯನಗರ, ತುಮಕೂರು, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬಾಗಲಕೋಟೆಯಲ್ಲಿ ಕೂಡ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಈ ಸುದ್ದಿ ಹಂಚಿಕೊಳ್ಳಿ