ಹುಟ್ಟು ಹಬ್ಬದ ದಿನವೇ ಅಪಘಾತ ಬಲಿಯಾದ ವಿದ್ಯಾರ್ಥಿನಿ

ಚಿಕ್ಕಬಳ್ಳಾಪುರ: ಹುಟ್ಟು ಹಬ್ಬದ ದಿನವೇ ವಿದ್ಯಾರ್ಥಿನಿಯೊಬ್ಬಳು ವಿಧಿಯಾಟಕ್ಕೆ ಬಲಿಯಾಗಿರುವ ಘಟನೆ ಚಿಕ್ಕಬಳ್ಳಾಪುರ (Chikkaballapura) ತಾಲೂಕಿನಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ ತಾಲ್ಲೂಕಿನ‌ ಹೊನ್ನೇನಹಳ್ಳಿ ಗ್ರಾಮದ ವಿದ್ಯಾಥಿನಿ ಸಾನ್ನಪ್ಪಿದ್ದಾಳೆ. ಕಾಲೇಜು ವಿದ್ಯಾರ್ಥಿನಿ ರಕ್ಷಿತಾ ಮೃತ ದುರ್ದೈವಿ. ಈಕೆ ಬೆಂಗಳೂರಿನ ಖಾಸಗಿ ಕಾಲೇಜೊಂದರಲ್ಲಿ ಬಿ.ಕಾಂ ಓದುತ್ತಿದ್ದಳು ಎನ್ನಲಾಗಿದೆ. ಸೋಮವಾರ ರಕ್ಷಿತಾಳ ಹುಟ್ಟು ಹಬ್ಬ ಇದ್ದ ಹಿನ್ನೆಲೆಯಲ್ಲಿ ರಾತ್ರಿ ಕಾರಿನಲ್ಲಿ ಮನೆಗೆ ಬರುತ್ತಿದ್ದಾಗ ಡಿವೈಡರ್‌ಗೆ ಡಿಕ್ಕಿಯಾಗಿದೆ. ಆದರೆ, ಅಪಘಾತದಲ್ಲಿ ಯುವತಿ ಸಾವನ್ನಪ್ಪಿದ್ದಾಳೆ.

ಘಟನೆಯಲ್ಲಿ ಕಾರು ಚಾಲಕನಿಗೂ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಪೋಲಿಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಈ ಸುದ್ದಿ ಹಂಚಿಕೊಳ್ಳಿ