ಮಾಜಿ ಕ್ರಿಕೆಟರ್ ರಾಬಿನ್ ಉತ್ತಪ್ಪ ವಿರುದ್ಧ ಅರೆಸ್ಟ್ ವಾರಂಟ್

In ಕ್ರೀಡೆ
December 21, 2024
ಮಾಜಿ ಕ್ರಿಕೆಟರ್ ರಾಬಿನ್ ಉತ್ತಪ್ಪ ವಿರುದ್ಧ ಅರೆಸ್ಟ್ ವಾರಂಟ್

ಮಾಜಿ ಕ್ರಿಕೆಟರ್ ರಾಬಿನ್ ಉತ್ತಪ್ಪ ವಿರುದ್ಧ ಅರೆಸ್ಟ್ ವಾರಂಟ್ ಜಾರಿಯಾಗಿದೆ.

ರಾಬಿನ್ ಉತ್ತಪ್ಪ ಉದ್ಯೋಗಿಗಳು ಹಾಗೂ ಸರ್ಕಾರಕ್ಕೆ ವಂಚಿಸಿದ್ದಾರೆಂದು ಬಂಧನದ ವಾರೆಂಟ್ ಜಾರಿ ಮಾಡಲಾಗಿದೆ. ರಾಬಿನ್ ಉತ್ತಪ್ಪ ಸೆಂಚುರಿಸ್ ಲೈಫ್ ಸ್ಟೈಲ್ ಬ್ರಾಂಡ್ ಪ್ರೈವೆಟ್ ಲಿಮಿಟೆಡ್ ಎಂಬ ಖಾಸಗಿ ಕಂಪನಿ ನಡೆಸುತ್ತಿದ್ದಾರೆ. ಈ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಹಲವು ಸಿಬ್ಬಂದಿಗಳಿಗೆ ಪಿಎಫ್ ಹಣ ನೀಡದೆ ವಂಚಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ರಾಬಿನ್ ಉತ್ತಪ್ಪ ಒಡೆತನದ ಕಂಪೆನಿಯು ಸಂಬಳದಲ್ಲಿ ಪಿಎಫ್ ಹಣ ಕಟ್ ಮಾಡಿದ್ದರೂ, ಉದ್ಯೋಗಿಗಳ ಖಾತೆಗೆ ಹಾಕಿಲ್ಲ. ಹೀಗೆ 23 ಲಕ್ಷ ರೂ. ವಂಚಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪಿಎಫ್ಓ ರಿಜಿನಲ್ ಕಮಿಷನರ್ ಷಡಾಕ್ಷಿರಿ ಗೋಪಾಲ ರೆಡ್ಡಿ, ರಾಬಿನ್ ಉತ್ತಪ್ಪರನ್ನು ಬಂಧಿಸುವಂತೆ ಪೊಲೀಸರಿಗೆ ಪತ್ರ ಬರೆದಿದ್ದರು.

ಹೀಗಾಗಿ ಪುಲಕೇಶಿ ನಗರ ಪೊಲೀಸರು ರಾಬಿನ್ ಉತ್ತಪ್ಪ ಅವರಿಗೆ ನೋಟಿಸ್ ನೀಡಲು ಪೊಲೀಸರು ಅವರ ಮನೆಗೆ ತೆರಳಿದ್ದರು. ಆದರೆ ಪ್ರಸ್ತುತ ಆ ವಿಳಾಸದಲ್ಲಿ ವಾಸವಿಲ್ಲ. ಹೀಗಾಗಿ ಇದೀಗ ರಾಬಿನ್ ಉತ್ತಪ್ಪ ಅವರಿಗೆ ವಾರೆಂಟ್ ಜಾರಿಗೊಳಿಸಲಾಗಿದೆ. ಆದರೆ, ರಾಬಿನ್ ದುಬೈನಲ್ಲಿ ಇದ್ದಾರೆ ಎನ್ನಲಾಗಿದೆ. ಅವರ ವಿರುದ್ಧ ಪ್ರಕರಣ ದಾಖಲಾಗಿರುವ ಕಾರಣ ಬೆಂಗಳೂರಿಗೆ ಬರುವ ಸಾಧ್ಯತೆಯಿದೆ.

ಈ ಸುದ್ದಿ ಹಂಚಿಕೊಳ್ಳಿ