ಹೆಂಡತಿ ಮುಖ ನೋಡಿಕೊಂಡು ಕೂರಬೇಡಿ; 90 ಗಂಟೆ ಕೆಲಸ ಮಾಡಿ ಎಂದ ಎಲ್‌&ಟಿ ಮುಖ್ಯಸ್ಥ!

ನವದೆಹಲಿ: ವಾರಕ್ಕೆ 70ಕ್ಕೂ ಅಧಿಕ ಗಂಟೆ ಕೆಲಸ ಮಾಡಿ ಎಂದು ಇನ್ಫೋಸಿಸ್‌ (Infosys) ಮುಖ್ಯಸ್ಥ ನಾರಾಯಣ ಮೂರ್ತಿ(narayana murthy) ಇತ್ತೀಚೆಗಷ್ಟೇ ಹೇಳುವ ಮೂಲಕ ದುಡಿಯುವ ವರ್ಗದೊಳಗೆ ಅಸಮಾಧಾನಕ್ಕೆ ಕಾರಣವಾಗಿದ್ದರು. ಅವರ ಈ ಹೇಳಿಕೆಗೆ ನಮಗೆ ಖಾಸಗಿ ಬುದುಕು ಇಲ್ಲವೇ? ಎಂಬ ಪ್ರಶ್ನೆಗಳನ್ನು ಎತ್ತಲಾಗಿದೆ. ಇದೀಗ ಅವರ ದಾಟಿಯಲ್ಲಿಯೇ ಎಲ್‌&ಟಿ(L&T) ಮುಖ್ಯಸ್ಥರೂ ಮಾತನಾಡಿದ್ದಾರೆ. ಇದು ಕೂಡ ವಿವಾದ ಉಂಟು ಮಾಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ‘ಮನೆಯಲ್ಲಿ ಕುಳಿತು ಎಷ್ಟು ಹೊತ್ತು ಹೆಂಡತಿಯ ಮುಖ ನೋಡಿಕೊಂಡು ಇರುತ್ತೀರಿ. ವಾರದಲ್ಲಿ 90 ಗಂಟೆ… Read More

ಎಸ್ ಬಿಐ ಸ್ಪೆಷಲಿಸ್ಟ್ ಕೇಡರ್ ಹುದ್ದೆಗಳಿಗೆ ಅರ್ಜಿ ಆಹ್ವಾನ!

ಎಸ್ ಬಿಐ ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಹ ಅಭ್ಯರ್ಥಿಗಳು ಎಸ್‌ ಬಿಐನ ಅಧಿಕೃತ ವೆಬ್‌ ಸೈಟ್ sbi.co.in ಮೂಲಕ ಆನ್‌ ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದು. 150 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ನಿರ್ಧರಿಸಲಾಗಿದೆ. ನೋಂದಣಿ ಪ್ರಕ್ರಿಯೆಯು ಜನವರಿ 3 ರಿಂದ ಪ್ರಾರಂಭವಾಗಿದ್ದು, ಜನವರಿ 23ರ ವರೆಗೆ ನಡೆಯಲಿದೆ. ಅರ್ಹತೆ, ಆಯ್ಕೆ ಪ್ರಕ್ರಿಯೆ ಮತ್ತು ಇತರ ವಿವರಗಳನ್ನು ಇಲ್ಲಿ ಒದಗಿಸಲಾಗಿದೆ. ಪೋಸ್ಟ್‌ ಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಪದವಿ ಪೂರ್ಣಗೊಳಿಸಿರಬೇಕು ಮತ್ತು IIBF ನಿಂದ… Read More

ಕೆಪಿಎಸ್ಸಿಯಿಂದ 945 ಹುದ್ದೆಗಳಿಗೆ ಅರ್ಜಿ ಆಹ್ವಾನ!

ಕರ್ನಾಟಕ ಲೋಕಸೇವಾ ಆಯೋಗ (KPSC) 2025ನೇ ಸಾಲಿನ ನೇಮಕಾತಿ ಅಧಿಸೂಚನೆ ಪ್ರಕಟಿಸಿದ್ದು, 945 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಫೆ. 1ರೊಳಗಾಗಿ ಆನ್‌ ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದು. ಸಂಬಳ ರೂ.40900-83900/- ಪ್ರತಿ ತಿಂಗಳು ಇರಲಿದೆ. ಕೃಷಿ ಅಧಿಕಾರಿಗಳು 128, ಸಹಾಯಕ ಕೃಷಿ ಅಧಿಕಾರಿಗಳು 817 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಶೈಕ್ಷಣಿಕ ಅರ್ಹತೆ: KPSC ಅಧಿಕೃತ… Read More

2 ಬ್ಯಾಂಕ್ ಗಳಲ್ಲಿ 662 ಹುದ್ದೆಖಾಲಿ; ಇಂದೇ ಅರ್ಜಿ ಸಲ್ಲಿಸಿ

ಇತ್ತೀಚೆಗಷ್ಟೇ ಪದವಿ ಮುಗಿಸಿ ಉದ್ಯೋಗಕ್ಕಾಗಿ ಅಲೆದಾಡುತ್ತಿದ್ದೀರಾ? ಒಂದೊಳ್ಳೆ ಜಾಬ್ ಗಾಗಿ ಎಲ್ಲ ಕಡೆ ಅರ್ಜಿ ಸಲ್ಲಿಸಿ ಸುಸ್ತಾಗಿದ್ದೀರಾ? ಎಲ್ಲೆಲ್ಲಿ ವೆಕೆನ್ಸಿ ಇದೆ ಎಂದು ಹುಡುಕುತ್ತಿದ್ದೀರಾ? ಇನ್ನು ಚಿಂತೆ ಬೇಡ. ಎರಡು ಪ್ರಮುಖ ಬ್ಯಾಂಕ್ ಗಳು 662 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿವೆ. ಪದವಿ ಮುಗಿಸಿದವರು ಕೂಡಲೇ ಅರ್ಜಿ ಸಲ್ಲಿಸಿ, ಒಳ್ಳೆಯ ಉದ್ಯೋಗ ಪಡೆದುಕೊಳ್ಳಲು ಇದು ನಿಮಗೆ ಸಕಾಲ….. ಹೌದು, ದೇಶದ ಬೃಹತ್ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಆಗಿರುವ ಎಸ್ ಬಿಐ ನಲ್ಲಿ 600 ಪ್ರೊಬೇಷನರಿ ಆಫೀಸರ್ ಪೋಸ್ಟ್ಗಳನ್ನು… Read More

ರೈಲ್ವೆ ಇಲಾಖೆಯಲ್ಲಿ 32 ಸಾವಿರ ಹುದ್ದೆ; ನೇರ ನೇಮಕಾತಿ

ಕೇಂದ್ರ ಸರಕಾರದ ನೌಕರಿ ಪಡೆಯಬೇಕು ಎಂಬುದು ಕೋಟ್ಯಂತರ ಜನರ ಕನಸಾಗಿರುತ್ತೆ. ಉದ್ಯೋಗ ಭದ್ರತೆ, ವೇತನ ಶ್ರೇಣಿ ಸೇರಿ ಹತ್ತಾರು ಸೌಕರ್ಯ ಇರುವುದರಿಂದ ಅಭ್ಯರ್ಥಿಗಳು ಕೇಂದ್ರ ಸರ್ಕಾರದ ಹುದ್ದೆಯ ಕನಸು ಹೊಂದಿರುತ್ತಾರೆ. ಈಗ ಆ ಕನಸು ನನಸು ಮಾಡಿಕೊಳ್ಳುವ ಸಮಯ ಬಂದಿದೆ. ಹೌದು, ರೈಲ್ವೆ ಇಲಾಖೆಯಲ್ಲಿ ಭರ್ಜರಿ 32 ಸಾವಿರ ಹುದ್ದೆಗಳ ನೇಮಕಾತಿಗಾಗಿ ಇಲಾಖೆಯು ಶಾರ್ಟ್ ನೋಟಿಫಿಕೇಷನ್ ಹೊರಡಿಸಿದೆ. ಆದಾಗ್ಯೂ, ಜನವರಿಯಲ್ಲಿ ಅರ್ಜಿ ಸಲ್ಲಿಕೆ ಆರಂಭವಾಗಲಿದೆ ಎಂದು ತಿಳಿದುಬಂದಿದೆ. 2024ರಲ್ಲಿ ಸಾಲು ಸಾಲಾಗಿ ರೈಲ್ವೆ ಇಲಾಖೆಯು ನೇಮಕಾತಿ ಮಾಡಿಕೊಂಡಿದೆ.… Read More

ರಾಜ್ಯದಲ್ಲಿ 59 ಸರ್ಕಾರಿ ಶಿಕ್ಷಕರ ಕೊರತೆ: 6 ಸಾವಿರ ಶಾಲೆಗಳಲ್ಲಿ ಏಕೋಪಾಧ್ಯಾಯ!

ಬಂಧುಗಳೇ, ಕರ್ನಾಟಕ ನ್ಯೂಸ್ ಬೀಟ್ ಗೆ ಸ್ವಾಗತ. ಇಂದು ನಾವು ಕಣ್ಣಾಡಿಸಿದ್ದು ನಮ್ಮ ಸರ್ಕಾರಿ ಶಾಲೆಗಳತ್ತ..ಹೌದು!ರಾಜ್ಯದ ಸರ್ಕಾರಿ ಶಾಲೆಗಳು ದುಃಸ್ಥಿತಿಯಲ್ಲಿವೆ. ಸುಸಜ್ಜಿತ ಕಟ್ಟಡ, ಮಕ್ಕಳಿಗೆ ಮೂಲ ಸೌಕರ್ಯ ಕೊರತೆ, ಗುಣಮಟ್ಟದ ಶಿಕ್ಷಣದ ಸಮಸ್ಯೆಯಿಂದ ಸರ್ಕಾರಿ ಶಾಲೆಗಳು ಬಳಲುತ್ತಿವೆ. ಇದೇ ಕಾರಣಕ್ಕಾಗಿ ಬಡವರು ಕೂಡ ಸಾಲ ಮಾಡಿ ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಕಳುಹಿಸುವಂತಾಗಿದೆ. ಇದರ ಬೆನ್ನಲ್ಲೇ, ರಾಜ್ಯ ಸರ್ಕಾರಿ ಶಾಲೆಗಳಲ್ಲಿ 59 ಸಾವಿರಕ್ಕೂ ಅಧಿಕ ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಅದರಲ್ಲೂ, 6 ಸಾವಿರಕ್ಕೂ ಅಧಿಕ ಶಾಲೆಗಳಲ್ಲಿ ಒಬ್ಬರೇ… Read More

ತೆಂಕಬೆಟ್ಟು ಶಾಲೆಯಲ್ಲಿ ಸಂಭ್ರಮದ ವಾರ್ಷಿಕೋತ್ಸವ

ಉಡುಪಿ ಜಿಲ್ಲೆಯ ಬೈಂದೂರು ವಲಯದ ತೆಂಕಬೆಟ್ಟು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮದಿಂದ ಶಾಲಾ ವಾರ್ಷಿಕೋತ್ಸವ ನಡೆಯಿತು. ನಿವೃತ್ತ ಶಿಕ್ಷಕ ಸದಾಶಿವ ಶಾನುಭಾಗ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸರ್ಕಾರಿ ಶಾಲೆಗಳ ಬೆಳವಣಿಗೆಗೆ ಹೆಚ್ಚಿನ ಒತ್ತು ನೀಡಿದರೆ ಮಾತ್ರ ದೇಶದ ಸರ್ವತೋಮುಖ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಹೇಳಿದರು.ಮಾಜಿ ಶಾಸಕ ಗೋಪಾಲ್ ಪೂಜಾರಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸಂಕುಚಿತ ಮನೋಭಾವನೆ ಹೋಗಲಾಡಿಸಲು ಶಾಲಾ ವಾರ್ಷಿಕೋತ್ಸವ ಉತ್ತಮವಾದ ವೇದಿಕೆಯಾಗಿದೆ ಎಂದು ಅಭಿಪ್ರಾಯ ಪಟ್ಟರು. ವಿದ್ಯಾರ್ಥಿಗಳಿಗೆ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಕ್ರೀಡಾಕೂಟ ಮತ್ತು ಸಾಂಸ್ಕೃತಿ… Read More

5, 8ನೇ ತರಗತಿ ವಿದ್ಯಾರ್ಥಿಗಳಿಗೆ ಇನ್ನು ಮುಂದೆ ಫೇಲ್ ಶಾಕ್!

ನವದೆಹಲಿ: 5 ಮತ್ತು 8ನೇ ತರಗತಿ ಪರೀಕ್ಷೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ (Union Government) ಮಹತ್ವದ ನಿರ್ಧಾರ ಘೋಷಿಸಿದೆ. ಉಚಿತ ಮತ್ತು ಕಡ್ಡಾಯ ಶಿಕ್ಷಣದ ಮಕ್ಕಳ ಹಕ್ಕು (RTE) ಕಾಯ್ದೆ ನಿಯಮಗಳು – 2010 ಕ್ಕೆ ಕೇಂದ್ರ ಸರ್ಕಾರ ತಿದ್ದುಪಡಿ ಮಾಡಿದೆ. ಹೊಸ ನಿಯಮಗಳಂತೆ, 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ನಿಯಮಿತವಾಗಿ ಪರೀಕ್ಷೆಗಳನ್ನು ನಡೆಸುವ ಅಧಿಕಾರವನ್ನು ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ನೀಡಿದೆ. ಒಂದು ವೇಳೆ ಅವರು ಫೇಲ್ ಆದರೆ, ಅದೇ ತರಗತಿಯಲ್ಲಿ ಮುಂದುವರಿಯಬೇಕಾಗುತ್ತದೆ.… Read More

ಸಂಭ್ರಮದಿಂದ ನಡೆದ ಮರವಂತೆ ಮೆರಗು!

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೈಂದೂರು ವಲಯದ ಮರವಂತೆ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ವಿಜೃಂಭಣೆಯಿಂದ ನಡೆಯಿತು. ಮರವಂತೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಸುಶೀಲಾ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿದರು. ಶಾಸಕ ಗುರುರಾಜ್ ಗಂಟೆಹೊಳೆ ಮಾತನಾಡಿ, ಸರ್ಕಾರಿ ಶಾಲೆಗಳ ಬೆಳವಣಿಗೆಗೆ ಹೆಚ್ಚಿನ ಒತ್ತನ್ನು ನೀಡುವುದರಿಂದ ಮಾತ್ರ ದೇಶ ಸರ್ವತೋಮುಖವಾಗಿ ಅಭಿವೃದ್ಧಿ ಹೊಂದಲು ಸಾಧ್ಯ ಎಂದರು. ಮಾಜಿ ಶಾಸಕ ಗೋಪಾಲ್ ಪೂಜಾರಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸಂಕುಚಿತ ಮನೋಭಾವನೆ ಹೋಗಲಾಡಿಸಲು ಶಾಲಾ ವಾರ್ಷಿಕೋತ್ಸವ ಉತ್ತಮವಾದ ವೇದಿಕೆಯಾಗಿದೆ ಎಂದರು.ವಿದ್ಯಾರ್ಥಿಗಳಿಗಾಗಿ ಕ್ರೀಡಾಕೂಟ ಮತ್ತು ಸಾಂಸ್ಕೃತಿ ಕಾರ್ಯಕ್ರಮ… Read More

ರಾಜ್ಯದಲ್ಲಿ 6,158 ಏಕೋಪಾಧ್ಯಾಯ ಶಾಲೆ; 59,772 ಶಿಕ್ಷಕರ ಹುದ್ದೆ ಖಾಲಿ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇದ್ದು, ಬರೋಬ್ಬರಿ 6,158 ಶಾಲೆಗಳಲ್ಲಿ ಕೇವಲ ಒಬ್ಬರೇ ಒಬ್ಬ ಶಿಕ್ಷಕರು ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಪ್ರಾಥಮಿಕ ಶಾಲೆಗಳಲ್ಲಿ 50,067 ಹಾಗೂ ಪ್ರೌಢಶಾಲೆಗಳಲ್ಲಿ 9,705 ಹುದ್ದೆಗಳು ಖಾಲಿ ಇವೆ ಎಂದು ತಿಳಿದು ಬಂದಿದೆ. ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿರುವಂತೆ, ರಾಜ್ಯದಲ್ಲಿನ ಪ್ರಾಥಮಿಕ ಶಾಲಾ ಶಿಕ್ಷಕರ ಕೊರತೆ ಹೆಚ್ಚಾಗಿದೆ. ಇದು ಪ್ರಾಥಮಿಕದಿಂದ ಪ್ರೌಢಶಾಲೆಯವರೆಗೆ ಎಲ್ಲಾ ಹಂತಗಳಲ್ಲಿ ಶೈಕ್ಷಣಿಕ ಗುಣಮಟ್ಟವನ್ನು ನಾಶಪಡಿಸುತ್ತಿದೆ ಎಂದು… Read More