ಸಿಲಿಂಡರ್ ಸ್ಫೋಟ ಪ್ರಕರಣ: 8 ಅಯ್ಯಪ್ಪ ಮಾಲಾಧಾರಿಗಳ ಕುಟುಂಬಕ್ಕೆ ಪರಿಹಾರ ಘೋಷಣೆ
ಹುಬ್ಬಳ್ಳಿ: ಸಿಲಿಂಡರ್ ಸ್ಫೋಟ ದುರಂತದಲ್ಲಿ ಸಾವನ್ನಪ್ಪಿದ 8 ಜನ ಅಯ್ಯಪ್ಪ ಮಾಲಾಧಾರಿಗಳ ಕುಟುಂಬಗಳಿಗೆ ರಾಜ್ಯ ಸರ್ಕಾರ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದೆ. ಪರಿಹಾರಕ್ಕಾಗಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಪತ್ರ ಬರೆದಿದ್ದರು. ಈ ಪತ್ರಕ್ಕೆ ಸ್ಪಂದಿಸಿರುವ ಸಿಎಂ ಸಿದ್ದರಾಮಯ್ಯ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಹುಬ್ಬಳ್ಳಿಯ ಅಚ್ಚವ್ವ ಕಾಲೋನಿಯ ಅಯ್ಯಪ್ಪನ ಸನ್ನಿಧಿಯಲ್ಲಿ ಡಿಸೆಂಬರ್ 22ರಂದು ಸಿಲಿಂಡರ್ ಸ್ಫೋಟ ಸಂಭವಿಸಿತ್ತು. ದುರಂತದಲ್ಲಿ 9 ಜನ ಮಾಲಾಧಾರಿಗಳು ಗಾಯಗೊಂಡಿದ್ದರು. ಆದರೆ, ಚಿಕಿತ್ಸೆ… Read More
