ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಆರೋಗ್ಯದಲ್ಲಿ ಏರುಪೇರು; ಐಸಿಯುನಲ್ಲಿ ಚಿಕಿತ್ಸೆ
ದಾವಣಗೆರೆ: ಹಿರಿಯ ರಾಜಕಾರಣಿಯಾಗಿರುವ ಹಾಗೂ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ (Shamanur Shivashankarappa) ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೃದಯ ಸಂಬಂಧಿ ಹಾಗೂ ಕಫದ ತೊಂದರೆಯಿಂದ ಶಾಮನೂರು ಶಿವಶಂಕರಪ್ಪ ಬಳಲುತ್ತಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ದಾವಣಗೆರೆ ಎಸ್ ಎಸ್ ಹೈಟೆಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಉಸಿರಾಟದ ತೊಂದರೆ ಹಿನ್ನಲೆಯಲ್ಲಿ ಫೇಸ್ ಮೇಕರ್ ಅಳವಡಿಕೆ ಮಾಡಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಅಭಿಮಾನಿಗಳು ಸಹಜವಾಗಿ… Read More
