ದರ್ಶನ್ ಮಧ್ಯಂತರ ಜಾಮೀನು ರದ್ದು ಕೋರಿ ಹೈಕೋರ್ಟ್ ಗೆ; ಪರಮೇಶ್ವರ್

ಬೆಂಗಳೂರು: ದರ್ಶನ್‌ ಅವರ ಮಧ್ಯಂತರ ಜಾಮೀನು ರದ್ದು ಕೋರಿ ಅರ್ಜಿ ಸಲ್ಲಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದರ್ಶನ್ ಗೆ ಸಿಕ್ಕಿರುವ ಜಾಮೀನು ಅವಧಿಯ 6 ವಾರಗಳ ಪೈಕಿ ಈಗಾಗಲೇ 4 ವಾರ ಮುಕ್ತಾಯವಾಗಿವೆ. ಇನ್ನೆರಡು ವಾರ ಬಾಕಿ ಇವೆ. ಈ ಮಧ್ಯೆ ಜಾಮೀನು ರದ್ದುಗೊಳಿಸುವಂತೆ ಕೋರಿ ಅರ್ಜಿ ಸಲ್ಲಿಸಲು ಸರ್ಕಾರ ಮುಂದಾಗಿದೆ.
ಮಧ್ಯಂತರ ಜಾಮೀನು ತಕ್ಷಣಕ್ಕೆ ರದ್ದು ಕೋರಿ ಹೈಕೋರ್ಟ್‌ಗೆ ಹೋಗುತ್ತೇವೆ. ರೇಣುಕಾಸ್ವಾಮಿ ಕೊಲೆಯಾದ ಜಾಗದಲ್ಲಿ ನಟ ದರ್ಶನ್‌ ಹಾಜರಿದ್ದ ಫೋಟೋ ಪೊಲೀಸರಿಗೆ ದೊರಕಿದ್ದು, ಅದನ್ನು ಕೋರ್ಟ್‌ಗೆ ಸಲ್ಲಿಸಿ ಜಾಮೀನು ರದ್ದುಪಡಿಸಲು ಅಗತ್ಯ ಕ್ರಮ ವಹಿಸಲಾಗುವುದು ಎಂದು ಪರಮೇಶ್ವರ್ ಹೇಳಿದ್ದಾರೆ.

ದರ್ಶನ್‌ ಜತೆಗಿದ್ದ ಇತರ ಆರೋಪಿಗಳ ಮೊಬೈಲ್‌ ಫೋನ್‌ಗಳನ್ನು ಎಫ್‌ಎಸ್‌ಎಲ್‌ ವರದಿಗಾಗಿ ಹೈದರಾಬಾದ್‌ಗೆ ಕಳಿಸಲಾಗಿತ್ತು. ಈ ಸಾಕ್ಷ್ಯವನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಜಾಮೀನು ರದ್ದುಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದ್ದಾರೆ.
ತಕ್ಷಣ ಶಸ್ತ್ರಚಿಕಿತ್ಸೆ ನಡೆಯದಿದ್ದರೆ ಬೆನ್ನು ಉರಿಯೇ ಮುರಿಯತ್ತದೆ ಎಂಬಂತೆ ಮಾತನಾಡಿದ್ದರು. ಆದರೆ, ದರ್ಶನ್‌ ಆಪರೇಷನ್‌ ಮಾಡಿಸದೆ ಕಾಲ ಕಳೆಯುತ್ತಿದ್ದಾರೆ. ಇದನ್ನು ನೋಡಿದರೆ ದರ್ಶನ್‌ಗೆ ಶಸ್ತ್ರಚಿಕಿತ್ಸೆ ಅಗತ್ಯವಿಲ್ಲ ಎಂಬುವುದು ಗೊತ್ತಾಗುತ್ತಿದೆ. ಹೀಗಾಗಿ ಅರ್ಜಿ ಸಲ್ಲಿಸಲು ಸರ್ಕಾರ ಮುಂದಾಗಿದೆ ಎಂದಿದ್ದಾರೆ.

ಈ ಸುದ್ದಿ ಹಂಚಿಕೊಳ್ಳಿ