ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

ದರ್ಶನ್ ಗೆ ವಿಪರೀತ ಬೆನ್ನು ನೋವು; ಮೆಡಿಕಲ್ ಬೆಡ್ ಮತ್ತು ದಿಂಬು

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್ ಮತ್ತೆ ಮುಂದೂಡಿದೆ.

ಈ ಹಿಂದೆ ಕೂಡ ಕೆಲವು ಬಾರಿ ಅರ್ಜಿಯ ವಿಚಾರಣೆಯನ್ನು ಮುಂದೂಡಲಾಗಿತ್ತು. ಈಗ ಶನಿವಾರಕ್ಕೆ ವಿಚಾರಣೆ ಮುಂದೂಡಲಾಗಿದೆ. ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ನಲ್ಲಿ ಅರ್ಜಿ ವಿಚಾರಣೆ ನಡೆದಿದ್ದು, ಹಿರಿಯ ವಕೀಲ ಸಿಎನ್ ನಾಗೇಶ್ ಇಂದು ದರ್ಶನ್ ಪರ ವಾದ ಮಂಡಿಸಿದರು. ಮಾಧ್ಯಮಗಳ ವಿಚಾರ, ಸಾಮಾಜಿಕ ಜಾಲತಾಣಗಳಲ್ಲಿ ದರ್ಶನ್ ವಿರುದ್ಧ ಮಾಡಲಾದ ಆರೋಪಗಳ ಬಗ್ಗೆ ನ್ಯಾಯಾಲಯದ ಗಮನ ಸೆಳೆದ ಕೊನೆಯಲ್ಲಿ ವಿಚಾರಣೆಯನ್ನು ಶನಿವಾರ ಅಂದರೆ ನಾಳೆಗೆ ಮುಂದೂಡಲಾಯಿತು.

ಎಸ್ಪಿಪಿ ಪ್ರಸನ್ನ ಕುಮಾರ್ ಸಕ್ಷಮದಲ್ಲಿ ವಾದ ಮಂಡನೆ ಆರಂಭಿಸಿದ ಹಿರಿಯ ವಕೀಲ ಸಿವಿ ನಾಗೇಶ್, ಪ್ರಕರಣದಲ್ಲಿ ಮಾಧ್ಯಮಗಳು ದರ್ಶನ್ ನ್ನು ಅಪರಾಧಿ ಎಂದೇ ಬಿಂಬಿಸಿವೆ. ಎಸ್ ಪಿಪಿ ಅವರು ಈ ತನಿಖೆಯನ್ನು ಅತ್ಯುತ್ತಮ ಎಂದಿದ್ದಾರೆ. ಆದರೆ ಇದೊಂದು ಕಳಪೆ ತನಿಖೆ ವರದಿ ಎಂದು ವಾದಿಸಿದರು. ಈ ವೇಳೆ ಎರಡು ಸುಪ್ರೀಂ ಕೋರ್ಟ್ ನ ಆದೇಶಗಳನ್ನು ಸಹ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದರು.

ಅಲ್ಲದೇ, ಮಾಧ್ಯಮಗಳ ವರದಿ ಆಧಾರದಲ್ಲಿ ತೀರ್ಪು ನೀಡಬಾರದೆಂದು ಮನವಿ ಮಾಡಿದರು. ಪೊಲೀಸರು ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿರುವ ವೈರುಧ್ಯಗಳ ಬಗ್ಗೆ ಗಮನ ಸೆಳೆದರು. ಜೊತೆಗೆ ಸುಪ್ರೀಂ ಕೋರ್ಟ್ನ ಕೆಲವು ತೀರ್ಪುಗಳನ್ನು ಉಲ್ಲೇಖಿಸಿ, ಪೊಲೀಸರು ತನಿಖೆಯ ವೇಳೆ ವಶಪಡಿಸಿಕೊಂಡಿರುವ ವಸ್ತುಗಳನ್ನು ಗಂಭೀರವಾಗಿ ಅಂದರೆ ಸಾಕ್ಷಿಗಳೆಂದು ಪರಿಗಣಿಸುವ ಅಗತ್ಯವಿಲ್ಲವೆಂದು ಕೂಡ ವಾದಿಸಿದರು. ವಾದ ಆಲಿಸಿದ ನ್ಯಾಯಾಧೀಶರು ವಿಚಾರಣೆಯನ್ನು ನಾಳೆಗೆ ಮುಂದೂಡಿದರು.

ಈ ಸುದ್ದಿ ಹಂಚಿಕೊಳ್ಳಿ