ಇಹಲೋಕ ತ್ಯಜಿಸಿದ ಮಾಜಿ ಸಿಎಂ ವೀರಪ್ಪ ಮೊಯ್ಲಿ ಪುತ್ರಿ

In ರಾಜಕೀಯ
June 30, 2024

ಬೆಂಗಳೂರು: ಮಾಜಿ ಸಿಎಂ ಹಾಗೂ ಕೇಂದ್ರದ ಮಾಜಿ ಸಚಿವ ಎಂ.ವೀರಪ್ಪ ಮೊಯ್ಲಿ ಅವರಿಗೆ ಪುತ್ರಿ ಇಹಲೋಕ ತ್ಯಜಿಸಿದ್ದಾರೆ.

ಮೊಯಿಲಿ ಪುತ್ರಿ, ಭರತನಾಟ್ಯ ಕಲಾವಿದೆ ಹಂಸ ಮೊಯ್ಲಿ ಅವರು ಭಾನುವಾರ ಬೆಂಗಳೂರಿನಲ್ಲಿ ಸಾವನ್ನಪ್ಪಿದ್ದಾರೆ. 46 ವರ್ಷದ ಹಂಸ ಮೊಯ್ಲಿ ಅವರು ಇತ್ತೀಚೆಗೆ ಅನಾರೋಗ್ಯದಿಂದ ಬಳಲುತ್ತಿದ್ದರು. ವರು ಭರತನಾಟ್ಯ ಹಾಗೂ ಪ್ರಾಯೋಗಿಕ ನೃತ್ಯ ಸಂಯೋಜಕಿಯಾಗಿದ್ದರು. ಅವರು ದೇವದಾಸಿಯರ ಜೀವನವನ್ನು ಆಧರಿಸಿದ ತಮಿಳು ಚಲನಚಿತ್ರ ಶೃಂಗಾರಂನಲ್ಲಿ ನಟಿಸಿದ್ದರು. ಆದರೆ, ಅನಾರೋಗ್ಯದಿಂದಾಗಿ ಅವರು ಇಹಲೋಕ ತ್ಯಜಿಸಿದ್ದಾರೆ.

ಈ ಸುದ್ದಿ ಹಂಚಿಕೊಳ್ಳಿ