ಪ್ರಸಾದ ಸ್ವೀಕರಿಸಿ ಅಸ್ವಸ್ಥರಾದ ಭಕ್ತರು; ನಾಲ್ವರ ಸ್ಥಿತಿ ಗಂಭೀರ

In ಬೆಳಗಾವಿ
May 22, 2024

ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ಬೀರೇಶ್ವರ ಹಾಗೂ ಕರೆಮ್ಮ ದೇವಿ ಜಾತ್ರೆ ನಡೆದ ಸಂದರ್ಭದಲ್ಲಿ ಪ್ರಸಾದ ಸ್ವೀಕರಿಸಿದ ಭಕ್ತರು ಅಸ್ವಸ್ಥರಾಗಿರುವ ಘಟನೆ ನಡೆದಿದೆ.

ಪ್ರಸಾದ (Prasadam) ಸೇವಿಸಿದ್ದ 46 ಜನ ಭಕ್ತರು ಅಸ್ವಸ್ಥಗೊಂಡಿದ್ದು ಐವರ ಸ್ಥಿತಿ ಗಂಭೀರವಾಗಿದೆ. ಮಾವಿನ ಹಣ್ಣಿನ ಶಿಖರಣಿ ಸೇವಿಸಿದ್ದವರಲ್ಲಿ ಏಕಾಏಕಿ ವಾಂತಿ-ಭೇದಿ ಕಾಣಿಸಿಕೊಂಡಿದೆ. ಅಸ್ವಸ್ಥರು ಸವದತ್ತಿ ಸಾರ್ವಜನಿಕ ಆಸ್ಪತ್ರೆ ಹಾಗೂ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆರೋಗ್ಯಾಧಿಕಾರಿಗಳು ಗ್ರಾಮದಲ್ಲಿ ಬೀಡು ಬಿಟ್ಟಿದ್ದಾರೆ. ತೀವ್ರ ಅಸ್ವಸ್ಥಗೊಂಡ ಐವರನ್ನ ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

ಈ ಸುದ್ದಿ ಹಂಚಿಕೊಳ್ಳಿ