33 views 0 secs 0 comments

ಪ್ರಧಾನಿ ಮೋದಿಗೆ ಡೊಮಿನಿಕಾದ ಅತ್ಯುನ್ನತ ನಾಗರಿಕ ಪ್ರಶಸ್ತಿ

In ದೇಶ, ವಿದೇಶ
November 14, 2024

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಡೊಮಿನಿಕಾದ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ಘೋಷಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಕೆರಿಬಿಯನ್ ರಾಷ್ಟ್ರಗಳ ಭೇಟಿಗೂ ಮುಂಚಿತವಾಗಿ, ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ ದೇಶಕ್ಕೆ ಅವರು ನೀಡಿದ ಅಪಾರ ಕೊಡುಗೆಗಾಗಿ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯಾಗಿರುವ ಡೊಮಿನಿಕಾ ಗೌರವವನ್ನು ಘೋಷಿಸಿದೆ.

ಅಲ್ಲದೇ, ಭಾರತದ ನಡುವಿನ ಪಾಲುದಾರಿಕೆಯನ್ನು ಬಲಪಡಿಸುವ ಅವರ ಸಮರ್ಪಣೆಯನ್ನು ಗುರುತಿಸಿ ಕಾಮನ್‌ವೆಲ್ತ್ ಆಫ್ ಡೊಮಿನಿಕಾ ತನ್ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯನ್ನು ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ನೀಡಲಿದೆ ಎಂದು ಹೇಳಿದೆ.

ಡೊಮಿನಿಕಾದ ಪ್ರಧಾನ ಮಂತ್ರಿ ಕಚೇರಿಯು ಈ ಕುರಿತು ಘೋಷಿಸಿದ್ದು, ಕಾಮನ್‌ವೆಲ್ತ್ ಆಫ್ ಡೊಮಿನಿಕಾದ ಅಧ್ಯಕ್ಷ ಸಿಲ್ವಾನಿ ಬರ್ಟನ್ ಭಾರತ-ಕ್ಯಾರಿಕಾಮ್ ಶೃಂಗಸಭೆ 2024ರ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ದೇಶದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ.

ಈ ಸುದ್ದಿ ಹಂಚಿಕೊಳ್ಳಿ