29 views 0 secs 0 comments

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಏಕನಾಥ್ ಶಿಂಧೆ

In ದೇಶ, ರಾಜಕೀಯ
November 26, 2024

ಮಹಾರಾಷ್ಟ್ರ ಸಿಎಂ ಸ್ಥಾನಕ್ಕೆ ಏಕನಾಥ್ ಶಿಂಧೆ ರಾಜೀನಾಮೆ ನೀಡಿದ್ದಾರೆ. ರಾಜಭವನಕ್ಕೆ ತೆರಳಿ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.

ಶಿಂಧೆ ಅವರೊಂದಿಗೆ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ದೇವೇಂದ್ರ ಫಡ್ನವಿಸ್ ಕೂಡ ಉಪಸ್ಥಿತರಿದ್ದರು. ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ, ಶಿವಸೇನೆ ಮತ್ತು ಎನ್‌ಸಿಪಿಯ ಮಹಾಮೈತ್ರಿಕೂಟವು ಭಾರಿ ಬಹುಮತ ಸಾಧಿಸಿದೆ. ಆದರೆ, ಇದುವರೆಗೂ ಸಿಎಂ ಆಯ್ಕೆ ಕಗ್ಗಂಟಾಗಿದೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರೊಂದಿಗೆ ಅವರ ಇಡೀ ಸಂಪುಟ ಕೂಡ ರಾಜೀನಾಮೆ ಸಲ್ಲಿಸಿದೆ. ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ ಅವರು ಮುಂದಿನ ಸರ್ಕಾರ ರಚನೆಯಾಗುವವರೆಗೂ ತಮ್ಮ ಹುದ್ದೆಯಲ್ಲಿ ಮುಂದುವರಿಯುವಂತೆ ಸಲಹೆ ನೀಡಿದ್ದಾರೆ.

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಇಂದು ನೂತನ ಸಿಎಂ ಹೆಸರು ಘೋಷಣೆಯಾಗುವ ಸಾಧ್ಯತೆ ಇದೆ. ದೇವೇಂದ್ರ ಫಡ್ನವೀಸ್ ನೂತನ ಸಿಎಂ ಆಗಬಹುದು ಎನ್ನಲಾಗುತ್ತಿದೆ.

ಬಿಜೆಪಿ ಶಾಸಕಾಂಗ ಪಕ್ಷದ ಸಭೆಗೂ ಮುನ್ನ ಶಿವಸೇನಾ ಬಣದ ಮುಖ್ಯಸ್ಥ ಏಕನಾಥ್ ಶಿಂಧೆ ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಜೆಪಿಗೆ ಸಿಎಂ ಸ್ಥಾನ ನೀಡಲು ಮಹಾಮೈತ್ರಿಕೂಟದಲ್ಲಿ ನಿರ್ಧರಿಸಲಾಗಿದೆ ಎನ್ನಲಾಗುತ್ತಿದೆ. ಶಿವಸೇನೆ ಮತ್ತು ಎನ್‌ಸಿಪಿ ಬಣಗಳಿಂದ ತಲಾ ಒಬ್ಬ ಉಪ ಮುಖ್ಯಮಂತ್ರಿ ಇರಲಿದ್ದಾರೆ.

ಈ ಸುದ್ದಿ ಹಂಚಿಕೊಳ್ಳಿ