2 ಲಕ್ಷ ಮತಗಳ ಅಂತರದಿಂದ ಜಯ ಸಾಧಿಸಿದ ಮಾಜಿ ಐಎಎಸ್ ಅಧಿಕಾರಿ ಸೆಂಥಿಲ್!

In ರಾಜಕೀಯ
June 04, 2024

ಮಂಗಳೂರು ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಹಾಗೂ ಆನಂತರ ಸ್ವಯಂ ನಿವೃತ್ತಿ ಪಡೆದುಕೊಂಡು ಕಾಂಗ್ರೆಸ್‌ಗೆ ಸೇರಿದ್ದ ಸಸಿಕಾಂತ್‌ ಸೆಂಥಿಲ್‌ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಸೆಂಥಿಲ್ ಅವರು ತಮಿಳುನಾಡಿನ ತಿರುವಲ್ಲೂರು ಕ್ಷೇತ್ರದಿಂದ ಕಾಂಗ್ರೆಸ್‌ ನಿಂದ ಕಣಕ್ಕೆ ಇಳಿದಿದ್ದರು. ಇದೀಗ ಡಿಎಂಕೆಯ ನಲ್ಲತಂಬಿ ಕೆ. ವಿರುದ್ಧ 2 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಕಂಡಿದ್ದಾರೆ. ಸೆಂಥಿಲ್‌ ಅವರು ದಕ್ಷಿಣ ಕನ್ನಡದಲ್ಲಿ ಜಿಲ್ಲಾಧಿಕಾರಿಯಾಗಿದ್ದ ವೇಳೆ, ಅತ್ಯುತ್ತಮ ಹಾಗೂ ದಕ್ಷ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಆನಂತರ ಅವರು ಸ್ವಯಂ ರಾಜೀನಾಮೆ ಪಡೆದು ರಾಜಕೀಯ ಪ್ರವೇಶಿಸಿದ್ದರು. ಸದ್ಯ ಚುನಾವಣೆಯಲ್ಲಿ ಗೆದ್ದು ಲೋಕಸಭೆ ಪ್ರವೇಶಿಸಿದ್ದಾರೆ.

ಈ ಸುದ್ದಿ ಹಂಚಿಕೊಳ್ಳಿ