ಮೈಸೂರು ಅ22: ಪ್ರಕೃತಿ ವಿಕೋಪದಿಂದ ಬಿದ್ದಿರುವ ಮಳೆ ಕಾರಣದಿಂದ ಆಗಿರುವ ಅನಾಹುತಗಳಿಗೆ ಪರಿಹಾರ ನೀಡುತ್ತೇವೆ. ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಅವರು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಮಳೆ ಅನಾಹುತಗಳ ಕುರಿತು ನಿಗಾ ವಹಿಸಿದ್ದೇವೆ. ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಸ್ಥಳ ಸಮೀಕ್ಷೆ ಕೂಡ ನಡೆಯುತ್ತಿದೆ. ಪರಿಹಾರ ನೀಡುತ್ತೇವೆ ಎಂದರು.





