ನಾಳೆ ಎಂದಿನಂತೆ ಇರಲಿದೆ ಮೆಟ್ರೋ ಸಂಚಾರ

ಬೆಂಗಳೂರು: ನಾಳೆ ಎಂದಿನಂತೆ ಮೆಟ್ರೋ ಸಂಚಾರ ಇರಲಿದೆ ಎಂದು ಬಿಎಂಆರ್ ಸಿಎಲ್ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

ಮಾಜಿ ಸಿಎಂ ಎಸ್.ಎಂ. ಕೃಷ್ಣ(SM Krishna) ಅವರು ನಿಧನ ಹೊಂದಿದ ಹಿನ್ನೆಲೆಯಲ್ಲಿ ಸರ್ಕಾರ ಬುಧವಾರ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಿಸಿದೆ. ಆದರೆ, ಡಿ.11ರಂದು ಮೆಚ್ರೋ ಸಂಚಾರದಲ್ಲಿ ಯಾವುದೇ ವ್ಯತ್ಯಯ ಇರುವುದಿಲ್ಲ. ಎಂದಿನಂತೆ ತನ್ನ ವೇಳಾಪಟ್ಟಿಯಂತೆ ಮೆಟ್ರೋ ರೈಲುಗಳು ಸಂಚರಿಸಲಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಸರ್ಕಾರವು ಶಾಲಾ, ಕಾಲೇಜು, ಸರ್ಕಾರಿ ಕಚೇರಿಗಳಿಗೆ ರಜೆ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ‘ನಮ್ಮ ಮೆಟ್ರೋ’ (Namma Metro) ಕೂಡ ಕಾರ್ಯ ನಿರ್ವಹಿಸುತ್ತಿಲ್ಲ ಎಂಬ ಸುಳ್ಳು ವದಂತಿ ಹರಡಿದಾಡಿತ್ತು. ಆದರೆ, ಎಂದಿನಂತೆ ಸಂಚಾರ ಇರಲಿದೆ. ತಪ್ಪು ಸಂದೇಶವನ್ನು ಯಾರೂ ನಂಬಬಾರದು ಎಂದು ಅಧಿಕಾರಿಗಳು ಹೇಳಿದ್ದಾರೆ.

ನಮ್ಮ ಮೆಟ್ರೋ’ ಎಂದಿನಂತೆ ಸೇವೆ ಸಲ್ಲಿಸಲಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕಾಗಿ ವಿನಂತಿ ಎಂದು ತನ್ನ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.

ಈ ಸುದ್ದಿ ಹಂಚಿಕೊಳ್ಳಿ