ಪಾಕಿಸ್ತಾನ್ ಪ್ರಜೆಗಳು ರಾಜ್ಯದಲ್ಲಿ; ಕೇಂದ್ರ ಗುಪ್ತಚರ ಇಲಾಖೆ ವಿಫಲ

In ಅಪರಾಧ, ರಾಜ್ಯ
October 05, 2024

ಬೆಂಗಳೂರು: ಪಾಕಿಸ್ತಾನ ಪ್ರಜೆಗಳು ರಾಜ್ಯದಲ್ಲಿ ವಾಸಿಸುತ್ತಿರುವ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಈ ಕುರಿತು ಸದ್ಯ ಗೃಹ ಸಚಿವ ಜಿ. ಪರಮೇಶ್ವರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿದೇಶಿಗರು ಬೆಂಗಳೂರಿಗೆ ಬಂದು ಪಾಸ್ ಪೋರ್ಟ್ ಮಾಡಿಸಿಕೊಳ್ಳುತ್ತಾರೆ ಅಂದ್ರೆ, ಎಲ್ಲೋ ಒಂದು ಕಡೆ ಕೇಂದ್ರ ಗುಪ್ತಚರ ಇಲಾಖೆ ವಿಫಲವಾಗಿದೆ. ಪಾಕಿಸ್ತಾನ ಪ್ರಜೆ ಬೆಂಗಳೂರಿನಲ್ಲಿ ವಾಸವಾಗಿರುವ ವಿಷಯ ಗೊತ್ತಾಗುತ್ತಿದ್ದಂತೆ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಇನ್ನೂ ಹಲವರು ಇರುವ ಶಂಕೆ ವ್ಯಕ್ತವಾಗುತ್ತಿದೆ. ಎಲ್ಲರನ್ನೂ ಬಂಧಿಸಲಿದ್ದಾರೆ ಎಂದರು.

ಸತೀಶ್ ಜಾರಕಿಹೊಳಿ ದೆಹಲಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ಸಚಿವ ಸತೀಶ್ ಜಾರಕಿಹೊಳಿ ಅವರ ಪುತ್ರಿ ಸಂಸದೆಯಾಗಿದ್ದಾರೆ. ಪುತ್ರಿಗೆ ಕ್ವಾರ್ಟರ್ಸ್ ಬೇಕು ಎಂಬ ಕಾರಣಕ್ಕೆ ದೆಹಲಿಗೆ ಹೋಗಿದ್ದಾರೆ. ಆ ವೇಳೆ ಖರ್ಗೆ ಅವರನ್ನೂ ಭೇಟಿ ಮಾಡಿದ್ದಾರೆ. ಅಲ್ಲದೇ, ಖರ್ಗೆ ಅವರ ಆರೋಗ್ಯ ವಿಚಾರಿಸಿದ್ದಾರೆ ಎಂದು ಹೇಳಿದ್ದಾರೆ.

ವಿಪಕ್ಷಗಳು ಸರ್ಕಾರಕ್ಕೆ ಸಲಹೆ-ಸೂಚನೆ ನೀಡಬೇಕು. ಅದು ಬಿಟ್ಟು ವಾಮ ಮಾರ್ಗದ ಪ್ರಯತ್ನ ಮಾಡಬಾರದು ಎಂದು ಹೇಳಿದ್ದಾರೆ.

ಈ ಸುದ್ದಿ ಹಂಚಿಕೊಳ್ಳಿ