ರಾಹುಲ್ ವಿರುದ್ಧ ಪೋಸ್ಟ್; ವಿಜಯೇಂದ್ರ ಕೇಸ್ ರದ್ದು

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ವಿರುದ್ಧ ಪೋಸ್ಟ್ ಮಾಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದಾಗಿದೆ.

ರಾಹುಲ್ ಅವರ ದ್ವೇಷದ ಅಂಗಡಿ ಕರ್ನಾಟಕವನ್ನು ಮತಾಂಧರ ಗಲಭೆಯ ತೋಟವನ್ನಾಗಿ ಮಾಡಿದೆ ಎಂದು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದರು. ಹೀಗಾಗಿ ವಿಜಯೇಂದ್ರ ವಿರುದ್ಧ ಎಫ್‌ಐಆರ್‌ ದಾಖಲಾಗಿತ್ತು. ಈ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿನ ಕ್ರಿಮಿನಲ್‌ ಪ್ರಕರಣವನ್ನು ಹೈಕೋರ್ಟ್‌ ರದ್ದುಗೊಳಿಸಿದೆ.

ಎಫ್‌ಐಆರ್‌ ಹಾಗೂ ವಿಚಾರಣಾ ನ್ಯಾಯಾಲಯದ ನ್ಯಾಯಿಕ ಪ್ರಕ್ರಿಯೆ ರದ್ದುಗೊಳಿಸುವಂತೆ ಕೋರಿ ಎಂದು ಕೋರಿ ಬಿ.ವೈ.ವಿಜಯೇಂದ್ರ ಹಾಗೂ ಬಿಜೆಪಿ ಘಟಕದ ಎಕ್ಸ್ ಖಾತೆ ನಿರ್ವಹಣೆದಾರ ಪ್ರಶಾಂತ ಮಾಕನೂರು ಸಲ್ಲಿಸಿದ್ದ ಕ್ರಿಮಿನಲ್‌ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ಈ ಕುರಿತು ಆದೇಶ ನೀಡಿದೆ.

ಈ ಸುದ್ದಿ ಹಂಚಿಕೊಳ್ಳಿ