ದಾಂಪತ್ಯ ಜೀವನಕ್ಕೆ ಕಾಲಿಡಲು ಸಿದ್ಧರಾದ ಪಿವಿ ಸಿಂಧು

In ಕ್ರೀಡೆ
December 03, 2024

ಒಲಿಂಪಿಕ್ ಪದಕ ವಿಜೇತೆ ಪಿವಿ ಸಿಂಧು (PV Sindhu) ಅವರು ದಾಂಪತ್ಯ ಜೀವನಕ್ಕೆ ಕಾಲಿಡಲು ಸಿದ್ಧರಾಗಿದ್ದು, ಇದೇ ತಿಂಗಳು ಮದುವೆ ಕಾರ್ಯಕ್ರಮ ನಡೆಯಲಿದೆ.

ಡಿ. 22 ರಂದು ಉದಯಪುರದಲ್ಲಿ (Udaipur) ಸಿಂಧು ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ಇತ್ತೀಚೆಗಷ್ಟೇ ಪಿ.ವಿ. ಸಿಂಧು ಅವರು ಡಿ.1 ರಂದು ಲಕ್ನೋದಲ್ಲಿ (Lucknow) ನಡೆದ 2024ರ ಸೈಯದ್ ಮೋದಿ ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಮಹಿಳಾ ಸಿಂಗಲ್ಸ್‌ ನ್ನು ಗೆದ್ದಿದ್ದರು.

ಪಿ.ವಿ. ಸಿಂಧು ಅವರು ಹೈದರಾಬಾದ್ ಮೂಲದ ಪೋಸಿಡೆಕ್ಸ್ ಟೆಕ್ನಾಲಜೀಸ್ ಎಂಬ ಖಾಸಗಿ ಕಂಪೆನಿಯ ಕಾರ್ಯನಿರ್ವಾಹಕ ನಿರ್ದೇಶಕ ವೆಂಕಟ ದತ್ತ ಸಾಯಿ ಎಂಬುವವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಡಿ. 20 ರಿಂದ ಮದುವೆ ಶಾಸ್ತ್ರಗಳು ಶುರುವಾಗಲಿವೆ. ಡಿ.22 ರಂದು ಉದಯಪುರದಲ್ಲಿ ಮದುವೆ ನಡೆಯಲಿದೆ. ಡಿ.24 ರಂದು ಹೈದರಾಬಾದ್‌ನಲ್ಲಿ ಆರತಕ್ಷತೆ ನಡೆಯಲಿದೆ ಎಂದು ತಿಳಿದು ಬಂದಿದೆ. ಸಿಂಧು ಅವರು ಇಲ್ಲಿಯವರೆಗೆ ಐದು ಚಾಂಪಿಯನ್ ಶಿಪ್ ಪದಕಗಳನ್ನು ಗೆದ್ದಿದ್ದಾರೆ.

ಈ ಸುದ್ದಿ ಹಂಚಿಕೊಳ್ಳಿ