38 views 2 secs 0 comments

ರಾಮ ಮಂದಿರ ಸ್ಫೋಟಿಸುವುದಾಗಿ ಬೆದರಿಕೆ; ಅಪ್ರಾಪ್ತ ವಶಕ್ಕೆ

In ದೇಶ, ಅಪರಾಧ
May 30, 2024

ಲಕ್ನೋ: ಅಯೋಧ್ಯೆಯ ರಾಮಮಂದಿರ (Ayodhya Ram Mandir) ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ಅಪ್ರಾಪ್ತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಉತ್ತರಪ್ರದೇಶದ (Uttar Pradesh) ಕುಶಿನಗರ ಜಿಲ್ಲೆಯ ಬಲುವಾ ಟಾಕಿಯಾ ಗ್ರಾಮದ 14 ವರ್ಷದ ಅಪ್ರಾತ ಈ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕ ಹಾಗೂ ಆತನ ಅಜ್ಜಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಾಲಕ ಮಂಗಳವಾರ ರಾತ್ರಿ ಪೊಲೀಸ್ ಕಂಟ್ರೋಲ್ ರೂಮ್‍ನ ತುರ್ತು ಸಹಾಯವಾಣಿ 112ಕ್ಕೆ ಕರೆಮಾಡಿ, ಮಂದಿರವನ್ನು ಬಾಂಬ್‍ನಿಂದ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ. ಪೊಲೀಸರು ಸೈಬರ್ ಸೆಲ್ ಸಹಾಯದಿಂದ ಆರೋಪಿಗಳಿದ್ದ ಸ್ಥಳವನ್ನು ಪತ್ತೆಹಚ್ಚಿದ್ದಾರೆ. ಬಾಲಕ ಬುದ್ಧಿ ಮಾಂದ್ಯನಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಕುಶಿನಗರ ಪೊಲೀಸ್ ವರಿಷ್ಠಾಧಿಕಾರಿ ಧವಲ್ ಜೈಸ್ವಾಲ್ ತಿಳಿಸಿದ್ದಾರೆ.

ಈ ಸುದ್ದಿ ಹಂಚಿಕೊಳ್ಳಿ