ಫಲಿತಾಂಶದ ದಿನ ಪ್ರದೀಪ್ ಈಶ್ವರ್ ಮನೆಯ ಮೇಲೆ ಕಲ್ಲು; ನಾಲ್ವರು ಆರೋಪಿಗಳು ಅರೆಸ್ಟ್

ಚಿಕ್ಕಬಳ್ಳಾಪುರ: ಚುನಾವಣೆ ಫಲಿತಾಂಶದ ನಂತರ ಶಾಸಕ ಪ್ರದೀಪ್ ಈಶ್ವರ್ ಮನೆಯ ಮೇಲೆ ಕಲ್ಲು ತೂರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.

ಕೌಶಿಕ್, ಚಂದು, ಶ್ರೀನಾಥ್ ಹಾಗೂ ನಿತೀನ್ ಬಂಧಿತ ಆರೋಪಿಗಳು. ಕುಡಿದ ಅಮಲಿನಲ್ಲಿ ಕಲ್ಲು ತೂರಿರುವುದಾಗಿ ಆರೋಪಿಗಳು ಹೇಳಿದ್ದಾರೆ ಎನ್ನಲಾಗಿದೆ.

ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾದ ದಿನದಂದು ರಾತ್ರಿ ಚಿಕ್ಕಬಳ್ಳಾಪುರ ನಗರದ ಕಂದವಾರದಲ್ಲಿರುವ ಪ್ರದೀಪ್ ಈಶ್ವರ್ ನಿವಾಸದ ಮೇಲೆ ಕಲ್ಲು ತೂರಾಟ ನಡೆದಿತ್ತು. ಪರಿಣಾಮ ಮನೆಯ ಕಿಟಕಿ ಗಾಜು ಒಡೆದಿದ್ದವು. ಈ ಕುರಿತು ಚಿಕ್ಕಬಳ್ಳಾಫುರ ನಗರ ಠಾಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.

ಈ ಸುದ್ದಿ ಹಂಚಿಕೊಳ್ಳಿ