30 views 0 secs 0 comments

ಸ್ವಾಮೀಜಿಗಳು ರಾಜಕಾರಣದಿಂದ ದೂರ ಇದ್ದರೆ ಉತ್ತಮ; ಡಿಸಿಎಂ

In ದೇಶ
November 28, 2024
ಸಿ.ಟಿ. ರವಿದು ಹರಕು ಬಾಯಿ; ಡಿ.ಕೆ. ಶಿವಕುಮಾರ್ ಆರೋಪ

ನವದೆಹಲಿ: ಸ್ವಾಮೀಜಿಗಳು ರಾಜಕಾರಣದಿಂದ ದೂರ ಇದ್ದಷ್ಟು ಸಮಾಜಕ್ಕೆ ಉತ್ತಮ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ದೆಹಲಿಯಲ್ಲಿ ಮಾತನಾಡಿದ ಅವರು, ಸ್ವಾಮೀಜಿಗಳಿಂದ ಸಮಾಜದಲ್ಲಿ ಆಘಾತವಾಗುವಂತಹ ಹೇಳಿಕೆಗಳು ಬರಬಾರದು. ಅದು ಅಶಾಂತಿ ಮೂಡಿಸುತ್ತದೆ. ಹೀಗಾಗಿ ವಿವಾದಾತ್ಮಕ ಹೇಳಿಕೆ ನೀಡಿ, ದೇಶದಲ್ಲಿ ಅಶಾಂತಿ ಮೂಡಿಸುವ ಪ್ರಯತ್ನ ಮಾಡಬಾರದು ಎಂದು ಹೇಳಿದ್ದಾರೆ.

ಮುಸ್ಲಿಮರಿಗೆ ನೀಡಿರುವ ಮತದಾನದ ಹಕ್ಕು ಹಿಂಪಡೆಯಬೇಕು ಎಂಬ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರ ಶೇಖರ ಸ್ವಾಮೀಜಿ ಹೇಳಿಕೆಯ ವಿಷಯವಾಗಿ ಮಾತನಾಡಿದ ಅವರು, ಸ್ವಾಮೀಜಿಗಳು ರಾಜಕಾರಣದಿಂದ ದೂರ ಇರುವುದು ಒಳಿತು. ಮತದಾನ ಎಂಬುದು ಸಂವಿಧಾನದ ಮೂಲಕ ಈ ದೇಶದ ಪ್ರತಿಯೊಬ್ಬ ಪ್ರಜೆಗೂ ಇರುವ ಹಕ್ಕಾಗಿದೆ. ದೇಶದಲ್ಲಿ ಜನಿಸಿದ ಪ್ರತಿಯೊಬ್ಬನ ಹಕ್ಕು ಅದು. ಸಂವಿಧಾನ ಎಲ್ಲರಿಗೂ ಒಂದೇ ಎಂಬ ಹಕ್ಕು ನೀಡಿದೆ ಎಂದು ಹೇಳಿದ್ದಾರೆ.

ಈ ಸುದ್ದಿ ಹಂಚಿಕೊಳ್ಳಿ