ಚಿಕ್ಕಮಗಳೂರು: ವೈದ್ಯನೊಬ್ಬ ಪತ್ನಿಯನ್ನು ಗೃಹ ಬಂಧನದಲ್ಲಿಟ್ಟು ಕಿರುಕುಳ ನೀಡಿರುವ ಘಟನೆಯೊಂದು ಬೆಳಕಿಗೆ ಬಂದಿದೆ.
ಚಿಕ್ಕಮಗಳೂರು ನಗರದ ದೋಣಿಕಣ ಬಡಾವಣೆಯಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ಚಿಕ್ಕಮಗಳೂರು ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿತ್ತು. ಸದ್ಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಗೃಹ ಬಂಧನದಲ್ಲಿದ್ದ ಮಹಿಳೆಯನ್ನು ಪೊಲೀಸರು ರಕ್ಷಿಸಿದ್ದಾರೆ. ವೈದ್ಯನೊಬ್ಬ ತನ್ನ ಪತ್ನಿಯನ್ನು ಮನೆಯಲ್ಲೇ ಬಂಧಿಸಿ ಚಿತ್ರಹಿಂಸೆ ನೀಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.
ಪತಿ ಡಾ. ರವಿಕುಮಾರ್ ಕೃತ್ಯ ಎಸಗಿದ ಪತಿ ಎನ್ನಲಾಗಿದೆ. ವೈದ್ಯ ಡಾ. ರವಿಕುಮಾರ್ ಹಾಸನದ ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ. 22 ವರ್ಷಗಳ ಹಿಂದೆ ವಿನುತಾರಾಣಿ (48) ಅವರನ್ನು ವಿವಾಹವಾಗಿದ್ದ. ಆದರೆ, ಇಬ್ಬರ ಮಧ್ಯೆ ಮನಸ್ತಾಪ ಉಂಟಾಗಿ ಬೇರೆ ಬೇರೆಯಾಗಿದ್ದರು. ಕಳೆದ 1 ವರ್ಷದ ಹಿಂದೆ ವಿಚ್ಛೇದನ ನೀಡಿ, ಮನೆಯಲ್ಲಿ ಕೂಡಿ ಹಾಕಿದ್ದ ಎನ್ನಲಾಗಿದೆ.
ಮಹಿಳೆಗೆ ಊಟದಲ್ಲಿ ಮತ್ತಿನ ಔಷಧ ನೀಡುತ್ತಿದ್ದ. ಅಲ್ಲದೇ, ದೈಹಿಕವಾಗಿ ಹಾಗೂ ಮಾನಸಿಕವಾಗಿ ಚಿತ್ರ ಹಿಂಸೆ ನೀಡುತ್ತಿದ್ದ. ವಿನುತಾ ರಾಣಿ ತೀವ್ರವಾಗಿ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಆರೋಪಿ ನಾಪತ್ತೆಯಾಗಿದ್ದಾನೆ.
ಬಂಧು ಮಿತ್ರರೇ ನಮಸ್ತೇ.
ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ. ನ್ಯಾಯ ನಮ್ಮೊಂದಿಗೆ, ನಾವು ನಿಮ್ಮೊಂದಿಗೆ..
ನಾಗರಾಜ್ ಅರೆಹೊಳೆ
ಸಂಪಾದಕರು, ಕರ್ನಾಟಕ ನ್ಯೂಸ್ ಬೀಟ್.
-ನಾಗರಾಜ್ ಅರೆಹೊಳೆ
ಸಂಪಾದಕರು, ಕರ್ನಾಟಕ ನ್ಯೂಸ್ ಬೀಟ್.