ಮಗನನ್ನೇ ಗೆಲ್ಲಿಸಿಕೊಂಡು ಬರಲಿಲ್ಲ ಅಂದ್ರೆ, ಕೇಂದ್ರ ಸಚಿವನಾಗಿ ಏನು ಮಾಡ್ತೀಯಾ? ಸಿ.ಪಿ. ಯೋಗೇಶ್ವರ್

In ರಾಮನಗರ, ರಾಜ್ಯ
November 25, 2024

ರಾಮನಗರ: ಚನ್ನಪಟ್ಟಣ ಕ್ಷೇತ್ರದ ಶಾಸಕ ಸಿ.ಪಿ. ಯೋಗೇಶ್ವರ್ ಅವರು ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಗುಡುಗಿದ್ದಾರೆ.

ಮಗನನ್ನು ಯುದ್ಧ ಭೂಮಿಗೆ ಕಳುಹಿಸಿ ನೀನು ರಣಹೇಡಿ ಆಗಿಬಿಟ್ಟೆ. ಕುರುಕ್ಷೇತ್ರದ ಕಥೆಯಲ್ಲಿ ಬಭ್ರುವಾಹನ ಹೇಳಿದ ಸ್ಥಿತಿ ಕುಮಾರಸ್ವಾಮಿಯದ್ದು (HD Kumaraswamy). ಮಗನನ್ನೇ ಗೆಲ್ಲಿಸಿಕೊಂಡು ಬರಲಿಲ್ಲ ಅಂದರೆ ಕೇಂದ್ರ ಸಚಿವ ಆಗಿ ಏನು ಪ್ರಯೋಜನ ಎಂದು ಗುಡುಗಿದ್ದಾರೆ.

ದೇವೇಗೌಡರ ನಾಯಕತ್ವ, ದೇವೇಗೌಡರು ಹುಟ್ಟುಹಾಕಿದ ಪಕ್ಷ ಅದು. ದೇವೇಗೌಡರಿಗೆ ವಯೋಸಹಜ ಇರುವುದರಿಂದ ಪಕ್ಷ ಮುನ್ನಡೆಸಲು ಸಾಧ್ಯ ಆಗುತ್ತಿಲ್ಲ. ಅದೊಂದು ಕುಟುಂಬ ಪಕ್ಷ. ಕುಮಾರಸ್ವಾಮಿ ಅವರು ಸೋತಿದ್ದಾರೆ. ಅವರ ನಾಯಕತ್ವದಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೇವಲ 19 ಸೀಟು ಪಡೆದುಕೊಂಡಿತ್ತು. ಡಿಕೆಶಿ ಕೆಪಿಸಿಸಿ ಅಧ್ಯಕ್ಷರಾಗಿ 136 ಸೀಟು ಗೆದ್ದಿದ್ದಾರೆ. ಈ ಎರಡು ಹೋಲಿಕೆ ನೋಡಿದರೆ ಕುಮಾರಸ್ವಾಮಿ ನಾಯಕತ್ವ ಕ್ಷೀಣಿಸುತ್ತಿದೆ ಎಂಬುವುದು ಗೊತ್ತಾಗುತ್ತದೆ ಎಂದು ಹೇಳಿದ್ದಾರೆ.

ಈ ಸುದ್ದಿ ಹಂಚಿಕೊಳ್ಳಿ